ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನಿಂದ ಕಂಗೆಟ್ಟಿರುವಾಗಲೇ ಪಕ್ಷದ ಹಿರಿಯ ನಾಯಕರು ತಿರುಗಿ ಬಿದ್ದಿದ್ದಾರೆ.
ಪಕ್ಷದ ನಾಯಕರಾದ ರಾಮಲಿಂಗಾರೆಡ್ಡಿ ಅಸಮಾಧಾನ ಹೊರ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಈ ಸ್ಥಿತಿಗೆ ಹೊಸಬರು, ವಲಸಿಗರು ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಿದ್ದರಾಮಯ್ಯ ಮತ್ತು ಟೀಂನ್ನೇ ಟಾರ್ಗೆಟ್ ಮಾಡಿ ಟ್ವೀಟ್ ಮಾಡಿರುವ ರಾಮಲಿಂಗಾ ರೆಡ್ಡಿ, ಕಾಂಗ್ರೆಸ್ ಪಕ್ಷದ ಬಗ್ಗೆ ಅರಿವಿಲ್ಲದ ಹೊಸಬರು, ವಲಸಿಗರಿಗೆ ಮಣೆ ಹಾಕಿದ್ದೇ ಕಾರಣವಾಗಿದೆ. ಪಕ್ಷದ ಆಂತರಿಕ ಸಮಸ್ಯೆಗಳನ್ನು ಬಗೆಹರಿಸಲು ಮುಂಚೂಣಿ ನಾಯಕರೇ ಕಾರಣರಾಗಿದ್ದಾರೆ. ಅಲ್ಲದೆ ಹಿರಿಯರ ಕಡೆಗಣನೆ, ಕಾಂಗ್ರೆಸ್ ಸಚಿವರ ಸಂಘಟನಾ ಕೊರೆತೆ ಸೋಲಿಗೆ ಕಾರಣವಾಗಿದೆ. ಕಾಂಗ್ರೆಸ್ ಸಚಿವರು, ಕಾರ್ಯಕರ್ತರ ನಡುವೆ ಸಮನ್ವಯತೆಯೇ ಇಲ್ಲವಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನೆ, ದೂರದೃಷ್ಟಿತ್ವ ಕೊರತೆಯಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು.
ಹಿರಿಯರ ಸಲಹೆ ಪರಿಗಣಿಸದಿರುವುದು, ಕೆಲವು ಸಚಿವರ ಕಾರ್ಯಕ್ಷಮತೆ ಕೂಡ ಪಕ್ಷಕ್ಕೆ ಹಿನ್ನಡೆಯಾಗಲು ಮುಖ್ಯ ಕಾರಣವೆಂದು ಹೇಳಿದ್ದಾರೆ. ಪಕ್ಷದ ಹಿತಕ್ಕಾಗಿ ಹಿರಿಯರು ಸಮಾಲೋಚನೆ ನಡೆಸಬೇಕಿದೆ. ಯಾರೂ ಪಕ್ಷ ಬಿಡದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಅವರು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…