ಬೆಂಗಳೂರು: “ಕಾಂಗ್ರೆಸ್ ಪಕ್ಷದ ಸರ್ವನಾಶ ಉಡುಪಿಯಿಂದಲೇ ಪ್ರಾರಂಭವಾಗಿದೆ “ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್ ಪಕ್ಷದ ಷಡ್ಯಂತ್ರವಿದೆ. ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಮುಖಂಡರಿಂದ ಈ ವಿವಾದ ಸೃಷ್ಟಿಸುವ ಕೆಲಸವಾಗಿದೆ. ಕಾಂಗ್ರೆಸ್ ಮುಖಂಡರು ಮನಸು ಮಾಡಿದ್ದರೆ ಈ ಸಮಸ್ಯೆ ಬಗೆ ಹರಿಸಬಹುದಿತ್ತು. ಆ ಆರು ಜನ ವಿದ್ಯಾರ್ಥಿನಿಯರಿಗೆ ತಿಳುವಳಿಕೆ ನೀಡಬಹುದಿತ್ತು. ಆದರೆ ಕಾಂಗ್ರೆಸ್‌ಗೆ ಮುಸ್ಲಿಂ ಮತಗಳೇ ಮುಖ್ಯವಾಗಿದ್ದು ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಸರ್ವನಾಶವಾಗುವುದು ಖಚಿತ. ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ. ಈ ಹಿಂದೆ ಗೋ ಹತ್ಯೆ ನಿಷೇಧವನ್ನು ಉಡುಪಿಯಲ್ಲೇ ಮಾಡಿದ್ದರು. ಆಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡರು. ಚಾಮುಂಡೇಶ್ವರಿಯಲ್ಲೂ ಸೋತರು. ಈಗ ಉಡುಪಿಯಿಂದಲೇ ಹಿಜಾಬ್ ವಿವಾದ ಆರಂಭವಾಗಿದೆ, ಕಾಂಗ್ರೆಸ್ ಸರ್ನಾನಾಶ ಖಚಿತ ಎಂದು ಹೇಳಿದ್ದಾರೆ.
“ಕಾಂಗ್ರೆಸ್ ಹಿಂದೆ ವೀರಶೈವ ಲಿಂಗಾಯತ ಧರ್ಮ, ನಂತರ ಮತಾಂತರದ ವಿಷಯ, ಗೋಹತ್ಯೆ ಈಗ ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಿತ್ತು. ಹಿಂದೂ ಮುಸ್ಲಿಂ ಒಡೆದಿದ್ದು ಕಾಂಗ್ರೆಸ್, ಆದರೆ ಅಪವಾದ ಮಾತ್ರ ಬಿಜೆಪಿ ಮೇಲೆ ಹಾಕಿದೆ” ಎಂದಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…