ನವದೆಹಲಿ: ಕಾಂಗ್ರೆಸ್ ಗೆ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗಲಿದ್ದು, ರಾಹುಲ್ ಗಾಂಧಿಯವರೇ ಅಧ್ಯಕ್ಷರಾಗಲೆಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್, ಪಕ್ಷವನ್ನು ಮುನ್ನಡೆಸಲು ರಾಹುಲ್ ಗಾಂಧಿ ಅವರೇ ಸೂಕ್ತ ವ್ಯಕ್ತಿ ಎಂದು ಅವರು ತಿಳಿಸಿದ್ದಾರೆ.ಸೋನಿಯಾ ಗಾಂಧಿ ಹಾಗೂ 23 ಪ್ರಮುಖ ಮುಖಂಡರ ನಡುವೆ ಇಂದು (ಶನಿವಾರ) ನಡೆಯಲಿರುವ ಸಭೆಗೂ ಮುಂಚಿತವಾಗಿ ಇಂತಹದೊಂದು ಅಭಿಪ್ರಾಯ ವ್ಯಕ್ತವಾಗಿದೆ.
ಅವರೆಲ್ಲರು ಸಕ್ರಿಯ ನಾಯಕತ್ವವನ್ನು ಕೋರಿದ್ದು, ಗಾಂಧಿ ಯಾವಾಗಲೂ ಮಾರ್ಗದರ್ಶಕ ಶಕ್ತಿಯಾಗಿರುತ್ತಾರೆ ಎಂದು ಅಭಿಪ್ರಾಯಪಟ್ಟಿದೆ.
ಸೋನಿಯಾ ಗಾಂಧಿ ಭೇಟಿ ಮಾಡುವ ಕಾಂಗ್ರೆಸ್ ನಿಯೋಗದಲ್ಲಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮೇಲ್ಮನೆ ಪಕ್ಷದ ಉಪನಾಯಕ ಆನಂದ್ ಶರ್ಮಾ, ಮಾಜಿ ಸಚಿವ ಪಿ ಚಿದಂಬರಂ, ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್, ಭೂಪಿಂದರ್ ಹೂಡಾ, ಪೃಥ್ವಿರಾಜ್ ಚವಾಣ್ ಮತ್ತು ಶಶಿ ತರೂರ್ ಇರಲಿದ್ದಾರೆ.
ಕಾಂಗ್ರೆಸ್ ಪಕ್ಷದ 99.9% ಸದಸ್ಯರು ರಾಹುಲ್ ಗಾಂಧಿಯನ್ನು ಅಧ್ಯಕ್ಷರಾಗಿ ನೋಡಲು ಬಯಸುತ್ತಾರೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಶುಕ್ರವಾರ ಹೇಳಿದ್ದಾರೆ. ಮುಂದಿನ ವರ್ಷ ಪಶ್ಚಿಮ ಬಂಗಾಳ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಬಿಹಾರ ಸೋಲಿನ ಪಾಠ ಕಲಿತ ಮೇಲೆ ಪಕ್ಷವು ತನ್ನ ಸಂಘಟನೆಯನ್ನು ಬಲಪಡಿಸಲು ಪ್ರಯತ್ನಿಸುತ್ತಿದೆ. ಇತ್ತೀಚೆಗೆ ಕೆಲವು ಕಾಂಗ್ರೆಸ್ ನಾಯಕರು ಹೊಸ ಅಧ್ಯಕ್ಷರ ಆಯ್ಕೆಯ ಬಗ್ಗೆ ಮಾತನಾಡಿದ್ದರು, ಆದರೆ ಸೋನಿಯಾ ಗಾಂಧಿ ಬಂಡಾಯವೆದ್ದ ನಾಯಕರುಗಳ ಜ 23 ಸಭೆ ನಡೆಸಲು ಕರೆದಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…