Featured

ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ರಾಹುಲ್ ಗಾಂಧಿ ಅವರೇ ಸೂಕ್ತ ವ್ಯಕ್ತಿ ,ಶೇ. 99.9ರಷ್ಟು ಕಾರ್ಯಕರ್ತರು ರಾಹುಲ್‌ ಗಾಂಧಿಯನ್ನು ಅಧ್ಯಕ್ಷರನ್ನಾಗಿ ನೋಡಲು ಬಯಸುತ್ತಾರೆ: ರಣದೀಪ್‌ ಸುರ್ಜೇವಾಲಾ -Vishwanews24

ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ರಾಹುಲ್ ಗಾಂಧಿ ಅವರೇ ಸೂಕ್ತ ವ್ಯಕ್ತಿ , ಶೇ. 99.9ರಷ್ಟು ಕಾರ್ಯಕರ್ತರು ರಾಹುಲ್‌ ಗಾಂಧಿಯನ್ನು ಅಧ್ಯಕ್ಷರನ್ನಾಗಿ ನೋಡಲು ಬಯಸುತ್ತಾರೆ: ರಣದೀಪ್‌ ಸುರ್ಜೇವಾಲಾ -Vishwanews24

ನವದೆಹಲಿ: ಕಾಂಗ್ರೆಸ್ ಗೆ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗಲಿದ್ದು, ರಾಹುಲ್ ಗಾಂಧಿಯವರೇ ಅಧ್ಯಕ್ಷರಾಗಲೆಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್, ಪಕ್ಷವನ್ನು ಮುನ್ನಡೆಸಲು ರಾಹುಲ್ ಗಾಂಧಿ ಅವರೇ ಸೂಕ್ತ ವ್ಯಕ್ತಿ ಎಂದು ಅವರು ತಿಳಿಸಿದ್ದಾರೆ.ಸೋನಿಯಾ ಗಾಂಧಿ ಹಾಗೂ 23 ಪ್ರಮುಖ ಮುಖಂಡರ ನಡುವೆ ಇಂದು (ಶನಿವಾರ) ನಡೆಯಲಿರುವ ಸಭೆಗೂ ಮುಂಚಿತವಾಗಿ ಇಂತಹದೊಂದು ಅಭಿಪ್ರಾಯ ವ್ಯಕ್ತವಾಗಿದೆ.

ಅವರೆಲ್ಲರು ಸಕ್ರಿಯ ನಾಯಕತ್ವವನ್ನು ಕೋರಿದ್ದು, ಗಾಂಧಿ ಯಾವಾಗಲೂ ಮಾರ್ಗದರ್ಶಕ ಶಕ್ತಿಯಾಗಿರುತ್ತಾರೆ ಎಂದು ಅಭಿಪ್ರಾಯಪಟ್ಟಿದೆ.

ಸೋನಿಯಾ ಗಾಂಧಿ ಭೇಟಿ ಮಾಡುವ ಕಾಂಗ್ರೆಸ್ ನಿಯೋಗದಲ್ಲಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮೇಲ್ಮನೆ ಪಕ್ಷದ ಉಪನಾಯಕ ಆನಂದ್ ಶರ್ಮಾ, ಮಾಜಿ ಸಚಿವ ಪಿ ಚಿದಂಬರಂ, ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್, ಭೂಪಿಂದರ್ ಹೂಡಾ, ಪೃಥ್ವಿರಾಜ್ ಚವಾಣ್ ಮತ್ತು ಶಶಿ ತರೂರ್ ಇರಲಿದ್ದಾರೆ.

ಕಾಂಗ್ರೆಸ್ ಪಕ್ಷದ 99.9% ಸದಸ್ಯರು ರಾಹುಲ್ ಗಾಂಧಿಯನ್ನು ಅಧ್ಯಕ್ಷರಾಗಿ ನೋಡಲು ಬಯಸುತ್ತಾರೆ ಎಂದು ಪಕ್ಷದ ವಕ್ತಾರ ರಣದೀಪ್‌ ಸುರ್ಜೇವಾಲಾ ಶುಕ್ರವಾರ ಹೇಳಿದ್ದಾರೆ. ಮುಂದಿನ ವರ್ಷ ಪಶ್ಚಿಮ ಬಂಗಾಳ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಬಿಹಾರ ಸೋಲಿನ ಪಾಠ ಕಲಿತ ಮೇಲೆ ಪಕ್ಷವು ತನ್ನ ಸಂಘಟನೆಯನ್ನು ಬಲಪಡಿಸಲು ಪ್ರಯತ್ನಿಸುತ್ತಿದೆ. ಇತ್ತೀಚೆಗೆ ಕೆಲವು ಕಾಂಗ್ರೆಸ್ ನಾಯಕರು ಹೊಸ ಅಧ್ಯಕ್ಷರ ಆಯ್ಕೆಯ ಬಗ್ಗೆ ಮಾತನಾಡಿದ್ದರು, ಆದರೆ ಸೋನಿಯಾ ಗಾಂಧಿ ಬಂಡಾಯವೆದ್ದ ನಾಯಕರುಗಳ ಜ 23 ಸಭೆ ನಡೆಸಲು ಕರೆದಿದ್ದಾರೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

12 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

13 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

13 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

14 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

14 hours ago