Featured

ಕಾಂಗ್ರೆಸ್ ಪಕ್ಷವು ಸುಭಿಕ್ಷ ರಾಜ್ಯ ಕರ್ನಾಟಕವನ್ನು ಭಿಕ್ಷಾ ರಾಜ್ಯ ಮಾಡುತ್ತಿದೆ : ಪ್ರತಾಪ್ ಸಿಂಹ – Vishwanews24

ಕಾಂಗ್ರೆಸ್ ಪಕ್ಷವು ಸುಭಿಕ್ಷ ರಾಜ್ಯ ಕರ್ನಾಟಕವನ್ನು ಭಿಕ್ಷಾ ರಾಜ್ಯ ಮಾಡುತ್ತಿದೆ : ಪ್ರತಾಪ್ ಸಿಂಹ

ಮೈಸೂರು: ಕಾಂಗ್ರೆಸ್ ಪಕ್ಷವು ಸುಭಿಕ್ಷ ರಾಜ್ಯ ಕರ್ನಾಟಕವನ್ನು ಭಿಕ್ಷಾ ರಾಜ್ಯ ಮಾಡುತ್ತಿದೆ. ಲೋಕಸಭಾ ಚುನಾವಣೆವರೆಗೂ ಜನರನ್ನು ಗ್ಯಾರಂಟಿ ಜಾರಿ ಹೆಸರಿನಲ್ಲಿ ಮಂಗ್ಯಾ ಮಾಡುತ್ತಾರೆ. ಕಾಂಗ್ರೆಸ್ ನೀತಿಗಳಿಂದ ರಾಜ್ಯ ದಿವಾಳಿ ಆಗುತ್ತಿದೆ. ಸದ್ಯದಲೇ ಎಲ್ಲಾ ರೀತಿಯ ತೆರಿಗೆ ಹೆಚ್ಚು ಮಾಡುತ್ತಾರೆ. ಆಸ್ತಿ ನೋಂದಣಿ, ಮದ್ಯದ ತೆರಿಗೆ ಹೀಗೆ ಎಲ್ಲವೂ ಹೆಚ್ಚಾಗುತ್ತದೆ. ಕರ್ನಾಟಕಕ್ಕೆ ಶ್ರೀಲಂಕಾ, ಬಾಂಗ್ಲಾದೇಶದ ಸ್ಥಿತಿ ಬರುವ ಕಾಲ ದೂರವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಮೊದಲು ಕಾಂಗ್ರೆಸ್ ನವರು ಎದೆ ಬಡಿದುಕೊಂಡು ಊರು ಊರಿಗೆ ಹೋಗಿ ತಮಟೆ ಬಾರಿಸಿದ್ದರು. ವಿದ್ಯುತ್ ಎಲ್ಲರಿಗೂ ಉಚಿತ ಅಂದಿದ್ದರು, ಆದರೆ ಕೆಎಸ್ಆರ್ ಟಿಸಿ ಗೆ ಇನ್ನೂ ಮಾಹಿತಿ ಬಂದಿಲ್ಲ. ಸ್ವಾತಂತ್ರ್ಯ ಪೂರ್ವದಲ್ಲಿ ತಲೆ ಮೇಲೆ ಟೋಪಿ ಹಾಕಿ ಕೊಂಡವರನ್ನು ಕಾಂಗ್ರೆಸ್ ನವರು ಎನ್ನುತ್ತಿದ್ದರು. ಈಗ ಕಾಂಗ್ರೆಸ್ ನವರನ್ನು ಜನರಿಗೆ ಟೋಪಿ ಹಾಕುವವರು ಎನ್ನುತ್ತಾರೆ ಎಂದು ವ್ಯಂಗ್ಯವಾಡಿದರು.

ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತ ಎಂದು ಹೇಳಿದ್ದಿರಿ. ಈಗ ಸರಾಸರಿ ತೆಗೆದು ಉಚಿತ ಕೊಡುತ್ತೇವೆಂದು ಹೇಳಿದ್ದೀರಿ. ಇದು ಮೋಸ ಅಲ್ವಾ? ಯಾವುದು ಷರತ್ತು ಇಲ್ಲದೆ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲೇ ಬೇಕು. ಜನ್ ಧನ್ ಖಾತೆಯಿದೆ. ಅದಕ್ಕೆ ಆಧಾರ್ ಕಾರ್ಡ್ ಲಿಂಕ್ ಆಗಿದೆ. ಹೀಗಿದ್ದರೂ ಗೃಹ ಲಕ್ಷ್ಮಿ ಜಾರಿ ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದರು.

ಗೃಹ ಲಕ್ಷ್ಮಿ ಯೋಜನೆ ಮುಂದೂಡಲು ಕುಂಟು ನೆಪ ಹೇಳಲಾಗುತ್ತಿದೆ. ಮನೆ ಯಜಮಾನಿ ಯಾರೆಂದು ತೀರ್ಮಾನ ಮಾಡಬೇಕಂತೆ? ಮನೆಯೊಳಗೆ ಅತ್ತೆ – ಸೊಸೆ ಕುಳಿತು ಈ ತೀರ್ಮಾನ ಮಾಡಲು ಸಾಧ್ಯನಾ? ಹಿಂದೂಗಳ ಮನೆಯಲ್ಲದರೂ ಅತ್ತೆ – ಸೊಸೆ ನಡುವೆ ಯಜಮಾನಿಗೆ ಪೈಪೋಟಿ ಇರುತ್ತದೆ. ಆದರೆ, ಮುಸ್ಲಿಂರ ಮನೆಯಲ್ಲಿ ಎರಡು- ಮೂರು ಹೆಂಡತಿ ಇರುತ್ತಾರೆ. ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? ಅವರ ಮನೆಯೊಳಗೆ ಬೆಂಕಿ ಹಾಕುತ್ತಿದ್ದಿರಿ. ಕುಟುಂಬ ಒಡೆಯುವ ಕೆಲಸ ಆಗುತ್ತಿದೆ ಎಂದು ಪ್ರತಾಪ್ ಸಿಂಹ ಹೇಳಿದರು.

6 ಕೆಜಿ ಅಕ್ಕಿಯನ್ನು ಕೇಂದ್ರ ಸರಕಾರ ಕೊಡುತ್ತಿದೆ. ಇದಕ್ಕೆ ನಾಲ್ಕು ಸೇರಿಸಿ 10 ಕೆಜಿ ಕೊಟ್ಟರೆ ಅದು ನಿಮ್ಮ ಗ್ಯಾರಂಟಿ ಹೇಗೆ ಆಗುತ್ತೆ? ಇದು ಮೋಸ ಅಲ್ಲವೇ? ಯುವ ನಿಧಿ ಹೆಸರಿನಲ್ಲೂ ಸರಕಾರ ಜನರಿಗೆ ಮೋಸ ಮಾಡುತ್ತಿದೆ. ಮತಗಳ ಹಗಲು ದರೋಡೆ ಮಾಡಿ ಈಗ ಜನರಿಗೆ ಟೋಪಿ ಹಾಕುವ ಕೆಲಸ ಆಗುತ್ತಿದೆ ಎಂದ ಪ್ರತಾಪ್ ಸಿಂಹ, ಕೇಜ್ರಿವಾಲ್ 2013ರಲ್ಲಿ ಕಳಪೆ ಫ್ರೀ ಯೋಜನೆ ತಂದಿದ್ದರು. ಈಗ ಅದನ್ನೆ ಕಾಂಗ್ರೆಸ್ ಸರಕಾರ ಮಾಡಿದೆ. ಇದು ಕರ್ನಾಟಕ ಮಾಡೆಲ್ ಅಲ್ಲ. ಇದನ್ನು ಹಲವರು ರಾಜ್ಯದಲ್ಲಿ ಮಾಡಿ ಜನರನ್ನು ಮಂಗ್ಯಾ ಮಾಡಲಾಗಿದೆ. ಕಾಂಗ್ರೆಸ್ ನ ಪ್ರಣಾಳಿಕೆ ಈಡೇರಿಸಲು ಕೇಂದ್ರ ಬಜೆಟ್ ಹಣ ತಂದರೂ ಆಗಲ್ಲ ಎಂದರು.

Vishwa News 24

Recent Posts

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

55 seconds ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

9 minutes ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

14 minutes ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago