Featured

ಕಾಂಗ್ರೆಸ್ ಪಕ್ಷವೇ ನನ್ನ ಪಾಲಿನ ದೇವರು,ನನಗೆ ತಾಯಿ ಇದ್ದಂತೆ :  ಡಿಕೆಶಿ  – Vishwanews24

ಕಾಂಗ್ರೆಸ್ ಪಕ್ಷವೇ ನನ್ನ ಪಾಲಿನ ದೇವರು,ನನಗೆ ತಾಯಿ ಇದ್ದಂತೆ :  ಡಿಕೆಶಿ

ಬೆಂಗಳೂರು : ಕಾಂಗ್ರೆಸ್ ಪಕ್ಷವೇ ನನ್ನ ಪಾಲಿನ ದೇವರು, ಹೇಳಿದಂತೆ ಕೇಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾವುಕರಾಗಿದ್ದಾರೆ.

ಅವರು ಇಂದು ದೆಹಲಿಗೆ ತೆರಳುವ ವೇಳೆ ಬೆಂಗಳೂರು ಸುದ್ದಿಗಾರರ ಜೊತೆ ಮಾತನಾಡಿದರು.ಕಾಂಗ್ರೆಸ್ ಪಕ್ಷ, ನನ್ನ ಪಾಲಿನ ದೇವರು.ಕಾಂಗ್ರೆಸ್ ಪಕ್ಷ ನನ್ನ ಪಾಲಿನ ದೇವಾಲಯ.ಕಾಂಗ್ರೆಸ್ ಪಕ್ಷ, ನನಗೆ ತಾಯಿ ಇದ್ದಂತೆ.ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ.ನಾನು ನನ್ನ ದೇವರನ್ನು ಭೇಟಿ ಮಾಡಲು ದೇವಾಲಯಕ್ಕೆ ಹೋಗುತ್ತಿದ್ದೇನೆ.ನಾನು ಒಬ್ಬನೇ ಹೋಗುತ್ತಿದ್ದೇನೆ.ಒಬ್ಬನೇ ಬರುವಂತೆ ಪ್ರಧಾನ ಕಾರ್ಯದರ್ಶಿಯವರು ನನಗೆ ಸೂಚನೆ ಕೊಟ್ಟಿದ್ದಾರೆ.ಹೀಗಾಗಿ ಒಬ್ಬನೇ ಹೋಗುತ್ತಿದ್ದೇನೆ.ನನ್ನ ಆರೋಗ್ಯ ಸುಧಾರಿಸಿದ್ದು, ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದೇನೆ.ಜನ ನಮಗೆ ನೀಡಿರುವ ಆಶೀರ್ವಾದ, ನಮ್ಮ ಮೇಲೆ ಇಟ್ಟಿರುವ ನಂಬಿಕೆ, ಉಳಿಸಿ ಬೆಳೆಸಿಕೊಂಡು ಹೋಗಲು ನಾವು ಶ್ರಮಿಸಬೇಕಿದೆ ಎಂದರು.

ನಾವು ಕಾನೂನು ಬದ್ಧವಾಗಿ ದೇಶದ ಸಂವಿಧಾನ ಉಳಿಸಲು, ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಿಸಲು ರಾಜ್ಯದ ಜನತೆ ಹಾಗೂ ತಾಯಿ ಚಾಮುಂಡೇಶ್ವರಿ ಅವರ ಆಶೀರ್ವಾದ ಇರಲಿ.ಹೈಕಮಾಂಡ್ ಬಳಿ ಸಿಎಂ ಸ್ಥಾನ ಕೇಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಪಕ್ಷದ ರಾಷ್ಟ್ರೀಯ ನಾಯಕರು ನನ್ನನ್ನು ಏಕಾಂಗಿಯಾಗಿ ಬರಲು ತಿಳಿಸಿದ್ದು, ಹೀಗಾಗಿ ನಾನು ದೆಹಲಿಗೆ ಹೋಗುತ್ತಿದ್ದೇನೆ’ ಎಂದಷ್ಟೇ ತಿಳಿಸಿದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

4 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

12 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

12 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

13 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

13 hours ago