ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

Featured, ದಕ್ಷಿಣ ಕನ್ನಡ

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಶಾಂತಿಯುತ ವಾತಾವರಣ ನೆಲೆಸಿದ್ದು, ಇದಕ್ಕೆ ಕಾರಣರಾದ ಪೊಲೀಸ್ ಅಧಿಕಾರಿಗಳು ಹಾಗೂ ನಾಗರಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು.

ಮಂಗಳೂರಿನಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, ಶೀಘ್ರದಲ್ಲೇ ಹೊಸ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲಾಧ್ಯಕ್ಷರ ನೇಮಕಾತಿಗಾಗಿ ಕೇಂದ್ರದಿಂದ ವೀಕ್ಷಕರು ಆಗಮಿಸಲಿದ್ದು, ಅವರ ವರದಿ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು – vishwanews24

ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗಿದೆ. ಮತದಾರರ ಪಟ್ಟಿಯಿಂದ ಹೊರಗುಳಿದವರ ದಾಖಲಾತಿಗಾಗಿ ಮತ್ತೊಮ್ಮೆ ವಿಶೇಷ ಅಭಿಯಾನ ನಡೆಸುವಂತೆ ಮನವಿ ಮಾಡಿದ್ದೇವೆ. ನೈಜ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಆದರೆ ನೈಜ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿರುವಂತೆ ಕಾಣುತ್ತಿದೆ ಎಂದು ಅವರು ಟೀಕಿಸಿದರು.

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು – vishwanews24

ಬಿಜೆಪಿ ಶಾಸಕರೇ ಆತ್ಮಸಾಕ್ಷಿಯ ಆಧಾರದ ಮೇಲೆ ಮತ ಚಲಾಯಿಸುವುದಾಗಿ ಹೇಳಿದ್ದರು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿವೆ ಎಂದು ಆರೋಪಿಸಿದರು.

 

Leave a Reply