ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಶಾಂತಿಯುತ ವಾತಾವರಣ ನೆಲೆಸಿದ್ದು, ಇದಕ್ಕೆ ಕಾರಣರಾದ ಪೊಲೀಸ್ ಅಧಿಕಾರಿಗಳು ಹಾಗೂ ನಾಗರಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು.
ಮಂಗಳೂರಿನಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, ಶೀಘ್ರದಲ್ಲೇ ಹೊಸ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲಾಧ್ಯಕ್ಷರ ನೇಮಕಾತಿಗಾಗಿ ಕೇಂದ್ರದಿಂದ ವೀಕ್ಷಕರು ಆಗಮಿಸಲಿದ್ದು, ಅವರ ವರದಿ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.
ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗಿದೆ. ಮತದಾರರ ಪಟ್ಟಿಯಿಂದ ಹೊರಗುಳಿದವರ ದಾಖಲಾತಿಗಾಗಿ ಮತ್ತೊಮ್ಮೆ ವಿಶೇಷ ಅಭಿಯಾನ ನಡೆಸುವಂತೆ ಮನವಿ ಮಾಡಿದ್ದೇವೆ. ನೈಜ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಆದರೆ ನೈಜ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿರುವಂತೆ ಕಾಣುತ್ತಿದೆ ಎಂದು ಅವರು ಟೀಕಿಸಿದರು.
ಬಿಜೆಪಿ ಶಾಸಕರೇ ಆತ್ಮಸಾಕ್ಷಿಯ ಆಧಾರದ ಮೇಲೆ ಮತ ಚಲಾಯಿಸುವುದಾಗಿ ಹೇಳಿದ್ದರು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿವೆ ಎಂದು ಆರೋಪಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…