ಬೆಂಗಳೂರು: ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದಿಲ್ಲಿಯವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ಕೋಳಿವಾಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಕೆಪಿಸಿಸಿ ಅಧ್ಯಕ್ಷ ನಾನು, ಅವರ ರಾಜೀನಾಮೆ ಪ್ರಶ್ನೆಯೇ ಉದ್ಭವ ಆಗುವುದಿಲ್ಲ ಎಂದು ಹೇಳಿದರು.
ನಮ್ಮ ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ನವರು ರಾಜಕೀಯವಾಗಿ ಷಡ್ಯಂತ್ರ ರೂಪಿಸುತ್ತಿದ್ದು, ನಮ್ಮ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿರುವುದು ವಿರೋಧ ಪಕ್ಷಗಳಿಂದ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ ಇಲ್ಲಿ ನಮ್ಮ ಸರ್ಕಾರ ಇರುವುದು ಅವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…