Featured

ಕಾಂಗ್ರೆಸ್ ಪಕ್ಷ ಬಹುಮತ ಗೆದ್ದು ಅಧಿಕಾರಕ್ಕೆ ಬಂದರೆ  7 ಕೆಜಿ ಅಲ್ಲ 10 ಕೆಜಿ ಅಕ್ಕಿ ಉಚಿತ : ಸಿದ್ಧರಾಮಯ್ಯ ಘೋಷಣೆ – Vishwanews24

ಕಾಂಗ್ರೆಸ್ ಪಕ್ಷ ಬಹುಮತ ಗೆದ್ದು ಅಧಿಕಾರಕ್ಕೆ ಬಂದರೆ  7 ಕೆಜಿ ಅಲ್ಲ 10 ಕೆಜಿ ಅಕ್ಕಿ ಉಚಿತ : ಸಿದ್ಧರಾಮಯ್ಯ ಘೋಷಣೆ

ಬಾಗಲಕೋಟೆ: ನಮ್ಮ ಕಾಂಗ್ರೆಸ್ ಪಕ್ಷ ಮುಂಬರುವಂತ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು,ಅಧಿಕಾರಕ್ಕೆ ಬಂದರೇ 7 ಕೆಜಿ ಅಲ್ಲ, 10 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುತ್ತೇವೆ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಇಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆಳಗಲ್ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ವಾತಂತ್ರ್ಯ ಬಂದಾಗ ನಮಗೆ ಆಹಾರ ಸ್ವಾಲಂಬನೆ ಇರಲಿಲ್ಲ. ಆಹಾರ ಸ್ವಾಲಂಬನೆ ಮಾಡಿದ್ದು ಇಂದಿರಾ ಗಾಂದಿಯವರ ನೇತೃತ್ವದ ಸರ್ಕಾರ ಎಂದು ಹೇಳಿದರು.

ನಾನು ಸಿಎಂ ಆದಮೇಲೆ ಉಚಿತವಾಗಿ ತಲಾ 7 ಕೆಜಿ ಅಕ್ಕಿ ಕೊಟ್ಟೆ. ಹಸಿವು ಮುಕ್ತ ರಾಜ್ಯವಾಗಲೇ ಬೇಕು ಎಂಬ ಹಿನ್ನಲೆಯಲ್ಲಿ 7 ಕೆಜಿ ಅಕ್ಕಿ ನೀಡಲಾಯಿತು. ಆದ್ರೇ ಅದನ್ನೇ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತೆ. ಪುಕ್ಕಟ್ಟೆ ಪ್ರಚಾರವನ್ನು ಪಡೆದರು ಅಂದರು ಅಂತ ಹೇಳಿದರು.

ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿದ್ದರೇ ಗುಜರಾತ್ ಸೇರಿದಂತೆ ಬಿಜೆಪಿ ಆಡಳಿತವಿರುವಂತ ರಾಜ್ಯಗಳಲ್ಲಿ ಉಚಿತವಾಗಿ ಏಕೆ ಕೊಡುತ್ತಿಲ್ಲ? ಹಸಿವು ಮುಕ್ತ ರಾಜ್ಯವನ್ನಾಗಿ ಏಕೆ ಮಾಡಲಿಲ್ಲ ಎಂಬುದಾಗಿ ಪ್ರಶ್ನಿಸಿದರು.

ಬಡವರು, ರೈತರು, ಕಾರ್ಮಿಕರಿಗಾಗಿ ಇಂದಿರಾ ಕ್ಯಾಂಟೀನ್ ತೆರೆಯಲಾಯಿತು. ಆದ್ರೇ ಬೊಮ್ಮಾಯಿ ಅವರೇಕೆ ಇಂದಿರಾ ಕ್ಯಾಂಟೀನ್ ಬಂದ್ ಮಾಡಿದ್ರು ಎಂದು ಪ್ರಶ್ನಿಸಿದರು.

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೇ 7 ಕೆಜಿ ಅಲ್ಲ, 10 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುತ್ತೇವೆ ಎಂಬುದಾಗಿ ಇದೇ ಸಂದರ್ಭದಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ಘೋಷಣೆ ಮಾಡಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago