ವಿಜಯಪುರ: ಬಿಜೆಪಿ ಸೇಡಿನ ರಾಜಕಾರಣಕ್ಕಾಗಿ ಐಟಿ, ಇಡಿ ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದಲ್ಲಿ ಸೇಡಿನ ರಾಜಕೀಯ ನಡೆಯುತ್ತಿದೆ. ಚಿದಂಬರಂ ಆಯ್ತು, ಈಗ ಡಿಕೆಶಿ ಬಂಧನವಾಗಿದೆ. ತಪ್ಪು ಮಾಡಿದವರ ವಿರುದ್ಧ ವಿಚಾರಣೆ ಮಾಡಲಿ ಎಂದು ಕಿಡಿಕಾರಿದರು.
ಈ ಹಿಂದೆ ಜನಾರ್ಧನ ರೆಡ್ಡಿಬಂಧನವಾಗಿದ್ದು ಗಣಿಗೆ ಸಂಬಂಧಿಸಿದ ವಿಚಾರದಲ್ಲಿ. ಈಗ ಡಿ. ಕೆ. ಶಿವಕುಮಾರ್ ಬಂಧನವಾಗಿದ್ದು ರಾಜಕೀಯ ಸೇಡಿನ ಹಿನ್ನೆಲೆಯಲ್ಲಿ ಎಂದು ಗೃಹ ಇಲಾಖೆ ಮಾಜಿ ಸಚಿವ ಎಂ. ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ನಾವು ಡಿ. ಕೆ. ಶಿವಕುಮಾರ್ ಜೊತೆಗಿದ್ದೇವೆ. ಇದನ್ನು ಎದುರಿಸಿ ಡಿ. ಕೆ. ಶಿವಕುಮಾರ್ ಹೊರಗೆ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಇಂದು ಸ್ವಾಭಾವಿಕವಾಗಿ ಪ್ರತಿಭಟನೆ ನಡೆಯುತ್ತಿದೆ. ಕೆಲ ಕಿಡಿಗೇಡಿಗಳೂ ಇಂಥ ವೇಳೆ ಭಾಗಿಯಾಗಿರುತ್ತಾರೆ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…