Featured

ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಕಾಪಾಡದೆ ಇದ್ದಿದ್ದರೆ ದೇಶದಲ್ಲಿ ಮೋದಿಯವರು ಪ್ರಧಾನಿಯಾಗಲು ಸಾಧ್ಯವಾಗುತ್ತಿರಲಿಲ್ಲ : ದಿನೇಶ್‍ಗುಂಡೂರಾವ್ -Vishwanews24

ಬೆಂಗಳೂರು,:ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಕಾಪಾಡದೆ ಇದ್ದಿದ್ದರೆ ಈ ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು.

ನಗರದ ಗಾಂಧಿಭವನದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ 150ನೇ ಜನ್ಮದಿನಾಚರಣೆ ನೆನಪಿನೊಂದಿಗೆ ಅವರ ಆದರ್ಶ ಪಾಲಿಸುವ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರನ್ನು ಸನ್ಮಾನಿಸುವ ಪ್ರೇರಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಲ್ಲದೆ, ಹಿಂದೂ ಮಹಾಸಭಾವೇ ಸ್ವಾತಂತ್ರ್ಯನಂತರ ಅಧಿಕಾರಕ್ಕೆ ಬಂದಿದ್ದರೆ ಪ್ರಜಾಪ್ರಭುತ್ವ ಉಳಿಯುತ್ತಿರಲಿಲ್ಲ. ಸರ್ವಾಧಿಕಾರಿ ಧೋರಣೆಯನ್ನು ಪಾಲಿಸುವ ಆರ್‍ಎಸ್‍ಎಸ್ ಮತ್ತು ಹಿಂದೂ ಮಹಾಸಭಾದ ನಾಯಕರು ದೇಶವನ್ನು ಬೇರೆಯ ಹಾದಿಗೆ ಕೊಂಡೊಯ್ಯುತ್ತಿದ್ದರು.ಅಖಂಡತೆ, ಸೌಹಾರ್ದತೆ ನಾಶವಾಗುತ್ತಿತ್ತು.ಮೋದಿಯಂಥವರು ಪ್ರಧಾನಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದರು.

ಈಗಿನ ಯುವಜನರಲ್ಲಿ ಮಹಾತ್ಮಗಾಂಧೀಜಿ ಮತ್ತು ಜವಾಹರ್‍ಲಾಲ್ ನೆಹರೂ ಬಗ್ಗೆ ನಕಾರಾತ್ಮಕ ಅಭಿಪ್ರಾಯಗಳಿವೆ. ಅವರಿಬ್ಬರೂ ಇಲ್ಲದೆ ಇದ್ದರೆ ಶ್ರೀಲಂಕಾ, ಪಾಕಿಸ್ತಾನ ಭಾರತದಲ್ಲೇ ಇರುತ್ತಿದ್ದವು.ವಿಶಾಲ ಭಾರತ ನಮ್ಮದಾಗಿರುತ್ತಿತ್ತು ಎಂದು ಹಗುರವಾಗಿ ಮಾತನಾಡುತ್ತಾರೆ.ನಾನಾ ದೇಶಗಳನ್ನು ಒಗ್ಗೂಡಿಸಿ ಆ ಸಂದರ್ಭದಲ್ಲಿ ಭಾರತ ರಚನೆಯಾಗಿದೆ.ಈಗ ಮಾತನಾಡುವುದು ಸುಲಭ. ಕಟ್ಟುವ ಹಂತದಲ್ಲಿ ಎಲ್ಲವೂ ಕಷ್ಟ.. ಆದರೂ ಕಾಂಗ್ರೆಸ್ ವಿರುದ್ಧವೇ ಮಾತನಾಡುತ್ತಾರೆ ಎಂದು ಟೀಕಿಸಿದರು.

ಗಾಂಧೀಜಿಯವರ ಹೋರಾಟದ ನೈತಿಕ ಶಕ್ತಿ ನಮಗೆ ಪ್ರೇರಣೆಯಾಗಬೇಕು.ಇತ್ತೀಚಿನ ದಿನಗಳಲ್ಲಿ ಸಾವರ್ಕರ್‍ಗೆ ಭಾರತರತ್ನ ನೀಡುವ ಚರ್ಚೆಯಾಗುತ್ತಿದೆ. ಗಾಂಧಿ ಕೊಂದ ಗೋಡ್ಸೆಗೂ ಭಾರತರತ್ನ ಕೊಡಬಹುದು ಎಂಬ ಅರ್ಥದಲ್ಲಿ ಸಚಿವರೊಬ್ಬರು ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

 

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

13 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

13 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

13 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

1 day ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

1 day ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

1 day ago