ಪಡುಬಿದ್ರಿ : ಪಡುಬಿದ್ರಿ: ಪಡುಬಿದ್ರಿ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ(ಕೆಆರ್‌ಡಿಸಿಎಲ್) ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿ 1ರ ಪಡುಬಿದ್ರಿ ಬಳಿಯ ಕಂಚಿನಡ್ಕ ಪ್ರದೇಶದಲ್ಲಿ ಸ್ಥಾಪಿಸಲು ದ್ದೇಶಿಸಿರುವ ಟೋಲ್ ಗೇಟ್ ರದ್ದತಿಗೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನೆಗೆ ಮೊದಲ ಹಂತದ ಜಯ ಲಬಿಸಿದೆ.
ಪ್ರತಿಭಟನೆ ಮುಗಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ನಿಯೋಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಗುರುವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಟೋಲ್ ರದ್ದತಿಯ ವಿಚಾರದಲ್ಲಿ ಮನವರಿಕೆ ಮಾಡಿದ ಪರಿಣಾಮವಾಗಿ ಮೊದಲ ಹಂತ ಜಯ ಸಿಕ್ಕಿದೆ
ನಿಯೋಗದ ಜೊತೆ ಮಾತನಾಡಿದ ಸಚಿವ ಜಾರಕಿಹೊಳಿ ಕಾರ್ಕಳದಿಂದ ಪಡುಬಿದ್ರಿ ಗೆ ಸಾಗುವ ರಸ್ತೆಯಲ್ಲಿ ಕಂಚಿನರ್ಕ ಭಾಗದಲ್ಲಿ ನಿರ್ಮಾಣವಾಗುವ ರದ್ದು ಮಾಡುವುದಾಗಿ ಭರವಸೆ ನೀಡಿದ್ದಾರೆ. ಯಾವುದೇ ಕ್ಷಣದಲ್ಲಾದರೂ ಸಂಬಂಧಪಟ್ಟ ಇಲಾಖೆಯಿಂದ ಆರ್ಡರ್ ಪಾಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಟೋಲ್ ನಿರ್ಮಾಣವಾಗುವ ಸ್ಥಳದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿತ್ತು .ಪ್ರತಿಭಟನೆಯಲ್ಲಿ ಐನೂರಕ್ಕೂ ಅಧಿಕ ಕಾರ್ಯಕರ್ತರು ಸಾರ್ವಜನಿಕರು ಭಾಗಿಯಾಗಿದ್ದರು.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…