ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ : ಪ್ರಹ್ಲಾದ ಜೋಶಿ – vishwanews24
ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ, ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ : ಪ್ರಹ್ಲಾದ ಜೋಶಿ
ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ ನಡೆಸುವ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಾಲ್ಮೀಕಿ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ನಿಲ್ಲಿಸುವುದಿಲ್ಲ. ಭ್ರಷ್ಟಾಚಾರದ ವಿರುದ್ಧ ಸುಯಾದ ದಿಕ್ಕಿನಲ್ಲೇ ಹೋರಾಟ ನಡೆಯುತ್ತಿದೆ. ಪಕ್ಷದೊಳಗೆ ಯಾವುದೇ ಅಪಸ್ವರವಿಲ್ಲ ಎಂದರು.
ಬಿಜೆಪಿ ಹೋರಾಟಕ್ಕೆ ಮೊದಲನೇ ಪಾದಯಾತ್ರೆ. 7ನೇ ಪಾದಯಾತ್ರೆ ಎನ್ನಬೇಕಿಲ್ಲ, ಪಕ್ಷದೊಳಗೆ ಎಲ್ಲರೂ ಕೂಡಿ ಯೇ ಹೋರಾಟ ತೀವ್ರಗೊಳಿಸುತ್ತೇವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಮತ್ತು ಗೃಹ ಸಚಿವರು ಸೇರಿ ರಾಷ್ಟ್ರೀಯ ನಾಯಕರು ಮತ್ತೊಂದು ಸುತ್ತಿನ ಹೋರಾಟದ ಬಗ್ಗೆ ನಿರ್ಧಸಲಿದ್ದಾರೆ. ರಾಜ್ಯದ ಎಲ್ಲಾ ನಾಯಕರ ಮುಂದಾಳತ್ವದಲ್ಲೇ ಪಾದಯಾತ್ರೆ ನಡೆಯುತ್ತದೆ ಎಂದರು.
