ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ. ಬಿಜೆಪಿ ರಾಜಕೀಯ ಮಾಡಲು ಮಹಿಳಾ ಮೀಸಲಾತಿ ಮತ್ತು ಡಿಲಿಮಿಟೇಷನ್ ಒಟ್ಟಾಗಿ ಸಂವಿಧಾನದ ತಿದ್ದುಪಡಿ ಮಾಡಲು ಮುಂದಾಗಿದ್ದಕ್ಕೆ ಬಿಲ್ ಫೇಲ್ ಆಯ್ತು ಅಂತ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧ ಎಂಬ ಬಿಜೆಪಿ ಆರೋಪ ವಿಚಾರವಾಗಿ ಮಾತನಾಡಿದ ಅವರು, “ಕಾಂಗ್ರೆಸ್ ಮಹಿಳಾ ಮೀಸಲಾತಿ ಪರ ಇದೆ. ನಾವು ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. 2023 ರಲ್ಲಿ ಸಂಸತ್‌ನಲ್ಲಿ ಬಿಲ್ ಪಾಸ್ ಆಗಿದೆ. ಅದನ್ನ ಅವರು ಜಾರಿ ಮಾಡಬೇಕು. ಮುಂದಿನ ಚುನಾವಣೆಗೆ ಮೀಸಲಾತಿ ಜಾರಿ ಮಾಡಲಿ” ಎಂದರು.
ಇದನ್ನೂ ಓದಿ :
“ಬಿಜೆಪಿ ಅವರು ಸಂವಿಧಾನಕ್ಕೆ ತಿದ್ದುಪಡಿ ತರೋದಕ್ಕೆ ಹೋಗಿದ್ದಕ್ಕೆ ನಿನ್ನೆ ಬಿಲ್ ಬಿದ್ದು ಹೋಯ್ತು. ಮಹಿಳಾ ಮೀಸಲಾತಿಗೆ ಮಾತ್ರ ಸಂವಿಧಾನದ ತಿದ್ದುಪಡಿ ಮಾಡಿದ್ರೆ, ಡಿಲಿಮಿಟೇಷನ್ ಸೇರಿಸದೇ ಅದೊಂದೆ ಮಾಡಿದ್ರೆ ಪಾಸ್ ಆಗ್ತಿತ್ತು. ಅದನ್ನ ಮಿಕ್ಸ್ ಮಾಡಿ ಮಾಡಿದ್ರು. ಅದಕ್ಕೆ ಬಿದ್ದು ಹೋಯ್ತು” ಎಂದು ಹೇಳಿದರು.
“ಬಿಜೆಪಿ ಅವರು ರಾಜಕೀಯ ಮಾಡೋದಕ್ಕಾಗಿಯೇ ಮಹಿಳಾ ಮೀಸಲಾತಿ ಮತ್ತು ಡಿಲಿಮಿಟೇಷನ್ ಎರಡು ಒಟ್ಟಿಗೆ ತಂದರು. ನಾವು ಡಿಲಿಮಿಟೇಷನ್‌ಗೆ ಮಾತ್ರ ವಿರೋಧ. ನಾವು ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ” ಎಂದು ತಿಳಿಸಿದರು.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…