ಕಾಂಗ್ರೆಸ್ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬೆಂಬಲಿಗರೊಂದಿಗೆ ಇಂದು ಬಿಜೆಪಿ ಸೇರ್ಪಡೆ – Vishwanews24
ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬೆಂಬಲಿಗರೊಂದಿಗೆ ಇಂದು ಬಿಜೆಪಿ ಸೇರ್ಪಡೆ
ಬೆಂಗಳೂರು: ಪುಲಿಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬೆಂಬಲಿಗರೊಂದಿಗೆ ಇಂದು ಬಿಜೆಪಿ ಸೇರ್ಪಡೆಯಾದರು. ಕಾಂಗ್ರೆಸ್ ತೊರೆದು ಬಿಎಸ್ಪಿ ಸೇರಿದ್ದ ಅಖಂಡ, ಆ ಪಕ್ಷಕ್ಕೂ ಗುಡ್ ಬೈ ಹೇಳಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು.
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜ ನೀಡುವ ಮೂಲಕ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಶ್ರೀನಿವಾಸ್ ಮೂರ್ತಿಯನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಯಡಿಯೂರಪ್ಪ, ”ಅಖಂಡ ಶ್ರೀನಿವಾಸ್ ಮೂರ್ತಿ ತಮ್ಮ ಬೆಂಬಲಿಗರೊಂದಿಗೆ ಪಕ್ಷಕ್ಕೆ ಬಂದಿದ್ದು ನಮಗೆ ದೊಡ್ಡ ಶಕ್ತಿ ತಂದಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರಿಗೆ 2.5ರಿಂದ 3 ಲಕ್ಷ ಮತಗಳ ಅಂತರದ ಗೆಲುವು ಖಚಿತ” ಎಂದರು.
ಕೊಣಾಜೆ: ಯುವ ದಂತ ವೈದ್ಯೆ ಡಾ. ಸ್ವಾತಿ ಶೆಟ್ಟಿ ನಿಧನ – Vishwanews24
”ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಾದಾಗ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಯನ್ನು ಸುಟ್ಟು ಹಾಕಲಾಗಿತ್ತು. ಆಗ ಕಾಂಗ್ರೆಸ್ ಅವರಿಗೆ ಬೆಂಬಲ ಕೊಡಲಿಲ್ಲ. ಆದರೆ, ನಾವು ಅವರ ಜೊತೆ ಗಟ್ಟಿಯಾಗಿ ನಿಂತಿದ್ದೇವೆ. ಈಗ ಅವರ ಸೇರ್ಪಡೆ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ, ಚುನಾವಣೆ ವೇಳೆಯಲ್ಲೇ ಬಂದಿರುವುದು ಶೋಭಾ ಗೆಲುವಿಗೆ ಸಹಕಾರಿಯಾಗಲಿದೆ” ಎಂದು ಹೇಳಿದರು.
