Featured

ಕಾಂಗ್ರೆಸ್ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬೆಂಬಲಿಗರೊಂದಿಗೆ ಇಂದು ಬಿಜೆಪಿ ಸೇರ್ಪಡೆ  – Vishwanews24

ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬೆಂಬಲಿಗರೊಂದಿಗೆ ಇಂದು ಬಿಜೆಪಿ ಸೇರ್ಪಡೆ

ಬೆಂಗಳೂರು: ಪುಲಿಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬೆಂಬಲಿಗರೊಂದಿಗೆ ಇಂದು ಬಿಜೆಪಿ ಸೇರ್ಪಡೆಯಾದರು. ಕಾಂಗ್ರೆಸ್ ತೊರೆದು ಬಿಎಸ್​​ಪಿ ಸೇರಿದ್ದ ಅಖಂಡ, ಆ ಪಕ್ಷಕ್ಕೂ ಗುಡ್ ಬೈ ಹೇಳಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜ ನೀಡುವ ಮೂಲಕ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಶ್ರೀನಿವಾಸ್ ಮೂರ್ತಿಯನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಯಡಿಯೂರಪ್ಪ, ”ಅಖಂಡ ಶ್ರೀನಿವಾಸ್​ ಮೂರ್ತಿ ತಮ್ಮ ಬೆಂಬಲಿಗರೊಂದಿಗೆ ಪಕ್ಷಕ್ಕೆ ಬಂದಿದ್ದು ನಮಗೆ ದೊಡ್ಡ ಶಕ್ತಿ ತಂದಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರಿಗೆ 2.5ರಿಂದ 3 ಲಕ್ಷ ಮತಗಳ ಅಂತರದ ಗೆಲುವು ಖಚಿತ” ಎಂದರು.

”ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಾದಾಗ ಅಖಂಡ ಶ್ರೀನಿವಾಸ್​​ ಮೂರ್ತಿ ಅವರ ಮನೆಯನ್ನು ಸುಟ್ಟು ಹಾಕಲಾಗಿತ್ತು. ಆಗ ಕಾಂಗ್ರೆಸ್ ಅವರಿಗೆ ಬೆಂಬಲ ಕೊಡಲಿಲ್ಲ. ಆದರೆ, ನಾವು ಅವರ ಜೊತೆ ಗಟ್ಟಿಯಾಗಿ ನಿಂತಿದ್ದೇವೆ. ಈಗ ಅವರ ಸೇರ್ಪಡೆ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ, ಚುನಾವಣೆ ವೇಳೆಯಲ್ಲೇ ಬಂದಿರುವುದು ಶೋಭಾ ಗೆಲುವಿಗೆ ಸಹಕಾರಿಯಾಗಲಿದೆ” ಎಂದು ಹೇಳಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

18 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago