ಮಾಗಡಿ (ರಾಮನಗರ): ಕಾಂಗ್ರೆಸ್ ಪಕ್ಷವೆಂದರೆ ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತ. ಕಾಂಗ್ರೆಸ್ ಪಕ್ಷವೆಂದರೆ ಭ್ರಷ್ಟಾಚಾರ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಕ್ತ ಭಾರತದ ಗುರಿ ಸಾಧಿಸುವುದರ ಜತೆ ಜತೆಯಲ್ಲೇಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಮಾಡುವುದರಲ್ಲಿ ಬಿಜೆಪಿ ಯಶಸ್ವಿಯಾಗಲಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಮಾಗಡಿಯಲ್ಲಿ ಗುರುವಾರ ಬೆಳಗ್ಗೆ ಹಿರಿಯ ಮುಖಂಡ ಎಚ್.ಎಂ.ಕೃಷ್ಣಮೂರ್ತಿ ಅವರನ್ನು ಬಿಜೆಪಿಗೆ ಬರಮಾಡಿಕೊಂಡ ನಂತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ಅಭಿವೃದ್ಧಿ ಪರ ಕಾರ್ಯಕ್ರಮಗಳ ಪ್ರವಾಹದಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುತ್ತಿದೆ. ದೇಶದ ಜನರ ನಾಡಿಮಿತಕ್ಕೆ ತಕ್ಕಂತೆ ಬಿಜೆಪಿ ಕೆಲಸ ಮಾಡುತ್ತಿರುವ ಕಾರಣಕ್ಕಾಗಿಯೇ ದೇಶಾದ್ಯಂತ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಎಲ್ಲ ಹಂತಗಳಲ್ಲೂ ಭ್ರಷ್ಟಾಚಾರ ಬೇರೂರಿತ್ತು. ಅದನ್ನು ಈಗ ಬುಡಸಮೇತ ಕಿತ್ತೊಗೆಯಲಾಗುತ್ತಿದೆ. ಬಚ್ಚಿಟ್ಟಿದ್ದ ಕಪ್ಪು ಹಣ ರಾಶಿರಾಶಿಯಾಗಿ ಹೊರಬರುತ್ತಿದೆ. ದೇಶದ ಆರ್ಥಿಕತೆಯಲ್ಲಿ, ಜಾರಿಯಾಗುತ್ತಿರುವ ಯೋಜನೆಗಳಲ್ಲಿ ಪಾರದರ್ಶಕತೆ ಬಂದಿದೆ. ಈ ಕಾರಣದಿಂದ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಜನರು ಕಾಂಗ್ರೆಸ್ ಪಕ್ಷವನ್ನು ತಮ್ಮತಮ್ಮ ಗ್ರಾಮಗಳಿಂದ ಹೊರ ಹಾಕಲಿದ್ದಾರೆಂದು ಉಪ ಮುಖ್ಯಮಂತ್ರಿ ಹೇಳಿದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…