ಚಿಂಚೋಳಿ (ಕಲಬುರಗಿ ಜಿಲ್ಲೆ): ಜಿಲ್ಲಾ ಕೋಲಿ ಸಮಾಜದ ಅಧ್ಯಕ್ಷ ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ ಮತ್ತೆ ಬಿಜೆಪಿ ಸೇರಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ರವಿರಾಜ ಕೊರವಿ ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಪ್ರಮುಖ ವಿಕೆಟ್ ಪತನವಾಗಿದೆ.
ಕಲಬುರಗಿ ಸಂಸದ ಡಾ. ಉಮೇಶ ಜಾಧವ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಈ ಸಂದರ್ಭದಲ್ಲಿ ಇದ್ದರು.
2016ರಲ್ಲಿ ನಡೆದ ಜಿ.ಪಂ ಚುನಾವಣೆಯಲ್ಲಿ ಕೋಡ್ಲಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಕೆಲವೇ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಲಿಂಗಾರೆಡ್ಡಿ ದೇಶಮುಖ ಎದುರು ಪರಾಭವಗೊಂಡಿದ್ದರು. ಇದಕ್ಕೂ ಮೊದಲು 2011ರಲ್ಲಿ ನಡೆದ ಚುನಾವಣೆಯಲ್ಲಿ ರವಿರಾಜ ಪತ್ನಿ ಸುನಂದಾ ಕೊರವಿ ಚಿಮ್ಮನಚೋಡ ಜಿ.ಪಂ ಮತಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2016ರಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದಾಗ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇವರು ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಅಳಿಯ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…