ಬೆಂಗಳೂರು, : ಕಾಂಗ್ರೆಸ್ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡಿದ್ದು ದ್ವೇಷ ರಾಜಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬಿಬಿಎಂಪಿ ವತಿಯಿಂದ ಕಬ್ಬನ್‌ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಲು ಆರಂಭಿಸಿದರೆ ಅದು ಎಲ್ಲೆಲ್ಲಿಗೋ ಹೋಗುತ್ತದೆ. ನನಗೆ ಅದರ ನೋವು ಗೊತ್ತು. ನಾನು ಅನುಭವಿಸಿದ್ದೇನೆ ಎಂದು ಹೇಳಿದರು.
ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ. ಹಿಂದಿನ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜಾಹೀರಾತು ನೀಡಿದ್ದು, ನಮ ಮೇಲೆ ಕೇಸು ದಾಖಲಿಸಲಿ, ಅದನ್ನು ಎದುರಿಸುತ್ತೇವೆ. ಆದರೆ ರಾಹುಲ್‌ಗಾಂಧಿಯವರನ್ನು ಮಧ್ಯಕ್ಕೆ ತರಲು ಅವರೇನು ಕೆಪಿಸಿಸಿ ಅಥವಾ ಎಐಸಿಸಿ ಅಧ್ಯಕ್ಷರಾಗಿದ್ದರೇ? ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕಾಮನ್‌ಸೆನ್‌್ಸ ಇರಲಿಲ್ಲವೇ? ಅವರ ಪಕ್ಷದ ಎಂಎಲ್‌ಸಿ ಮೂಲಕ ಕೇಸು ಹಾಕಿಸಿದ್ದೇಕೆ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್‌ನವರು ದ್ವೇಷ ರಾಜಕಾರಣ ಮಾಡುವುದಿಲ್ಲ. ರಾಹುಲ್‌ಗಾಂಧಿಯವರಿಗೆ ಅವರದ್ದೇ ಆದ ತೊಂದರೆಗಳಿವೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಮೂಗು ತೂರಿಸುವ ಅಗತ್ಯ ಅವರಿಗಿಲ್ಲ . ಕಾಂಗ್ರೆಸ್‌ನವರು ದ್ವೇಷ ಸಾಧಿಸಲು ನೀಚ ರಾಜಕಾರಣ ಮಾಡುವುದಿಲ್ಲ ಎಂದರು.2028ಕ್ಕೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತಂದೇ ತರುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲಾ ಸದಸ್ಯರು ಇದಕ್ಕಾಗಿ ಹಗಲು-ರಾತ್ರಿ ಕೆಲಸ ಮಾಡುತ್ತೇವೆ ಎಂದರು.
ನಾವು ವಿಶ್ವಮಾನವರಾಗಲು ಸಮಾಜದ ಅಭಿಪ್ರಾಯ ಮುಖ್ಯ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿರುವುದು ಹಾಗೂ ಮತದಾನ ಏಕೆ ಈ ರೀತಿ ಆಗಿದೆ ಎಂಬುದರ ಕುರಿತು ನಿನ್ನೆ ರಾತ್ರಿ ಒಕ್ಕಲಿಗ ಮುಖಂಡರ ಸಭೆಯಲ್ಲಿ ದೊಡ್ಡ ಚರ್ಚೆಯಾಗಿದೆ ಎಂದು ಹೇಳಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…