ಚಿಂಚೋಳಿ : ರಾಜ್ಯದಿಂದ ಬಿಜೆಪಿ ಸಂಸದರು ಆಯ್ಕೆಯಾಗಿದ್ದರೂ ಸಹಾ ರಾಜ್ಯದ ಪರವಾಗಿ ಯಾವುದೇ ಹೋರಾಟ ನಡೆಸಲಿಲ್ಲ. ಕನ್ನಡಿಗರ ಪರವಾಗಿ ಕೇಂದ್ರಕ್ಕೆ ಒಂದು ಪತ್ರವನ್ನು ಬರೆಯಲ್ಲಿಲ್ಲ. ಬೀದರ್ ಸಂಸದ ಭಗವಂತ ಖುಬಾ, ಕಲಬುರಗಿ ಡಾ. ಉಮೇಶ ಜಾಧವ್, ಶಾಸಕ ಡಾ. ಅವಿನಾಶ ಜಾಧವ್ ತ್ರಿಬಲ್ ಇಂಜಿನ್ ಸರಕಾರ ಇದ್ದರೂ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ, ಮನ್ ಕಿ ಬಾತ್ ಕೇಳಲಿಲ್ಲ. ಕಾಂಗ್ರೆಸ್ ಪಕ್ಷ ಬಡವರ ಬದುಕು ಕಟ್ಟುವುದಾಗಿದೆ. ಆದರೆ, ಬಿಜೆಪಿ ಭಾವನಾತ್ಮಕ ವಿಚಾರ ಮೂಡಿಸುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಅವರು, ಪಟ್ಟಣದ ಶ್ರೀ ಚೆನ್ನಕಲ್ಯಾಣ ಮಂಟಪದಲ್ಲಿ ಸೋಮವಾರ ಬೀದರ್ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾಭಿಮಾನದಿಂದ ಜೀವನ ಮಾಡಲು ನೆರವು ನೀಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಹಣ ಬಡವರಿಗೆ ನೀಡಲಾಗುತ್ತಿದೆ. ಇದಕ್ಕಾಗಿ ೫೨ ಸಾವಿರ ಕೋಟಿ ರು. ಖರ್ಚು ಮಾಡಲಾಗುತ್ತಿದೆ. ಕಾಂಗ್ರೆಸ್ ಯಾವಾಗಲೂ ಬಡವರಿಗೋಸ್ಕರ ಕೆಲಸ ಮಾಡುತ್ತಿದೆ. ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ನೆರವು ನೀಡುವಂತೆ ಮನವಿ ಮಾಡಿದರೂ ಸಹ ರಾಜ್ಯದ ಜನರ ಹಿತ ಕಾಪಾಡಲಿಲ್ಲ ನಮ್ಮ ತೆರಿಗೆ ನಮ್ಮ ಹಕ್ಕು ಬಗ್ಗೆ ಸುಪ್ರೀಂಕೋರ್ಟ್ ಮೋರೆ ಹೋಗಲಾಗಿತ್ತು. ಇದೀಗ ಉಚ್ಚ ನ್ಯಾಯಾಲಯ ಛೀಮಾರಿ ಹಾಕಿದೆ. ಬೀದರ್ ಲೋಕಸಭಾ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಭಗವಂತ ಖುಬಾ ಏನು ಆಭಿವೃದ್ಧಿ ಸಾಧನೆ ಮಾಡಿಲ್ಲ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಅವರಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಅಬ್ದುಲ್ ರವೂಪ ಮಿರಿಯಾಣ, ಬಾಬುರಾವ ಪಾಟೀಲ,ದೀಪಕನಾಗ ಪುಣ್ಯಶೆಟ್ಟಿ,ಅಜೀತ ಪಾಟೀಲ,ಭೀಮರಾವ ತೇಗಲತಿಪ್ಪಿ,ಬಸಯ್ಯ ಗುತ್ತೆದಾರ,ಮಹೆಮೂದ ಪಟೇಲ,ಬಾಸೀತ,ಆನಂದ ಟೈಗರ,ಶಬ್ಬೀರ ಅಹೆಮದ,ಸುರೇಶ ಬಂಟಾ, ಪ್ರಭುಲಿಂಗ ಲೇವಡಿ, ಚಿರಂಜೀವಿ, ನರಸಿಂಹಲು ಕುಂಬಾರ, ಮಲ್ಲಿಕಾರ್ಜುನರೆಡ್ಡಿ ನರನಾಳ, ಮಲ್ಲಿಕಾರ್ಜುನ ಕೋಲಕುಂದಿ, ಜಗದೇವ ಗೌತಮ ಇನ್ನಿತರಿದ್ದರು.
ಬಿಜೆಪಿ, ಜೆಡಿಎಸ್ ಅನೇಕ ಕಾರ್ಯಕರ್ತರು ತಮ್ಮ ಪಕ್ಷವನ್ನು ತೊರೆದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ ಪಕ್ಷಕ್ಕೆ ಸೇರ್ಪಡೆಯಾದರು ಎಲ್ಲರಿಗೂ ಕಾಂಗ್ರೆಸ ಪಕ್ಷದ ಧ್ವಜ ಮತ್ತು ಶಾಲು ಹಾಕಿ ಸ್ವಾಗತಿಸಿದರು.
ಚಿಂಚೋಳಿ ಮೀಸಲು ಮತಕ್ಷೇತ್ರದಿಂದ ೨೦೨೩ರಲ್ಲಿ ಕಾಂಗ್ರೆಸ ಪಕ್ಷದ ಅಭ್ಯರ್ಥಿ ಸುಭಾಷ ರಾಠೋಡ ಅಲ್ಪಮತಗಳಿಂದ ಸೋತಿದ್ದರು ಅವರೇ ಚಿಂಚೋಳಿ ಶಾಸಕರಾಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…