Featured

ಕಾಂಗ್ರೆಸ್‌ ಯಾವಾಗಲೂ ಬಡವರಿಗೋಸ್ಕರ ಕೆಲಸ ಮಾಡುತ್ತದೆ :ಪ್ರಿಯಾಂಕ್ ಖರ್ಗೆ – Vishwanews24

ಕಾಂಗ್ರೆಸ್‌ ಸರಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾಭಿಮಾನದಿಂದ ಜೀವನ ಮಾಡಲು ನೆರವು ನೀಡುತ್ತಿದೆ :ಪ್ರಿಯಾಂಕ್ ಖರ್ಗೆ

ಚಿಂಚೋಳಿ :  ರಾಜ್ಯದಿಂದ ಬಿಜೆಪಿ ಸಂಸದರು ಆಯ್ಕೆಯಾಗಿದ್ದರೂ ಸಹಾ ರಾಜ್ಯದ ಪರವಾಗಿ ಯಾವುದೇ ಹೋರಾಟ ನಡೆಸಲಿಲ್ಲ. ಕನ್ನಡಿಗರ ಪರವಾಗಿ ಕೇಂದ್ರಕ್ಕೆ ಒಂದು ಪತ್ರವನ್ನು ಬರೆಯಲ್ಲಿಲ್ಲ. ಬೀದರ್‌ ಸಂಸದ ಭಗವಂತ ಖುಬಾ, ಕಲಬುರಗಿ ಡಾ. ಉಮೇಶ ಜಾಧವ್, ಶಾಸಕ ಡಾ. ಅವಿನಾಶ ಜಾಧವ್ ತ್ರಿಬಲ್‌ ಇಂಜಿನ್‌ ಸರಕಾರ ಇದ್ದರೂ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ, ಮನ್‌ ಕಿ ಬಾತ್‌ ಕೇಳಲಿಲ್ಲ. ಕಾಂಗ್ರೆಸ್‌ ಪಕ್ಷ ಬಡವರ ಬದುಕು ಕಟ್ಟುವುದಾಗಿದೆ. ಆದರೆ, ಬಿಜೆಪಿ ಭಾವನಾತ್ಮಕ ವಿಚಾರ ಮೂಡಿಸುತ್ತಿದೆ ಎಂದು ಕಾಂಗ್ರೆಸ್‌ ವಕ್ತಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಅವರು, ಪಟ್ಟಣದ ಶ್ರೀ ಚೆನ್ನಕಲ್ಯಾಣ ಮಂಟಪದಲ್ಲಿ ಸೋಮವಾರ ಬೀದರ್‌ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್‌ ಸರಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾಭಿಮಾನದಿಂದ ಜೀವನ ಮಾಡಲು ನೆರವು ನೀಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಹಣ ಬಡವರಿಗೆ ನೀಡಲಾಗುತ್ತಿದೆ. ಇದಕ್ಕಾಗಿ ೫೨ ಸಾವಿರ ಕೋಟಿ ರು. ಖರ್ಚು ಮಾಡಲಾಗುತ್ತಿದೆ. ಕಾಂಗ್ರೆಸ್‌ ಯಾವಾಗಲೂ ಬಡವರಿಗೋಸ್ಕರ ಕೆಲಸ ಮಾಡುತ್ತಿದೆ. ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ನೆರವು ನೀಡುವಂತೆ ಮನವಿ ಮಾಡಿದರೂ ಸಹ ರಾಜ್ಯದ ಜನರ ಹಿತ ಕಾಪಾಡಲಿಲ್ಲ ನಮ್ಮ ತೆರಿಗೆ ನಮ್ಮ ಹಕ್ಕು ಬಗ್ಗೆ ಸುಪ್ರೀಂಕೋರ್ಟ್‌ ಮೋರೆ ಹೋಗಲಾಗಿತ್ತು. ಇದೀಗ ಉಚ್ಚ ನ್ಯಾಯಾಲಯ ಛೀಮಾರಿ ಹಾಕಿದೆ. ಬೀದರ್‌ ಲೋಕಸಭಾ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಭಗವಂತ ಖುಬಾ ಏನು ಆಭಿವೃದ್ಧಿ ಸಾಧನೆ ಮಾಡಿಲ್ಲ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಅವರಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಅಬ್ದುಲ್ ರವೂಪ ಮಿರಿಯಾಣ, ಬಾಬುರಾವ ಪಾಟೀಲ,ದೀಪಕನಾಗ ಪುಣ್ಯಶೆಟ್ಟಿ,ಅಜೀತ ಪಾಟೀಲ,ಭೀಮರಾವ ತೇಗಲತಿಪ್ಪಿ,ಬಸಯ್ಯ ಗುತ್ತೆದಾರ,ಮಹೆಮೂದ ಪಟೇಲ,ಬಾಸೀತ,ಆನಂದ ಟೈಗರ,ಶಬ್ಬೀರ ಅಹೆಮದ,ಸುರೇಶ ಬಂಟಾ, ಪ್ರಭುಲಿಂಗ ಲೇವಡಿ, ಚಿರಂಜೀವಿ, ನರಸಿಂಹಲು ಕುಂಬಾರ, ಮಲ್ಲಿಕಾರ್ಜುನರೆಡ್ಡಿ ನರನಾಳ, ಮಲ್ಲಿಕಾರ್ಜುನ ಕೋಲಕುಂದಿ, ಜಗದೇವ ಗೌತಮ ಇನ್ನಿತರಿದ್ದರು.

ಬಿಜೆಪಿ, ಜೆಡಿಎಸ್ ಅನೇಕ ಕಾರ್ಯಕರ್ತರು ತಮ್ಮ ಪಕ್ಷವನ್ನು ತೊರೆದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ ಪಕ್ಷಕ್ಕೆ ಸೇರ್ಪಡೆಯಾದರು ಎಲ್ಲರಿಗೂ ಕಾಂಗ್ರೆಸ ಪಕ್ಷದ ಧ್ವಜ ಮತ್ತು ಶಾಲು ಹಾಕಿ ಸ್ವಾಗತಿಸಿದರು.

ಚಿಂಚೋಳಿ ಮೀಸಲು ಮತಕ್ಷೇತ್ರದಿಂದ ೨೦೨೩ರಲ್ಲಿ ಕಾಂಗ್ರೆಸ ಪಕ್ಷದ ಅಭ್ಯರ್ಥಿ ಸುಭಾಷ ರಾಠೋಡ ಅಲ್ಪಮತಗಳಿಂದ ಸೋತಿದ್ದರು ಅವರೇ ಚಿಂಚೋಳಿ ಶಾಸಕರಾಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

21 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

22 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

24 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

24 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago