ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್‍ಗೆ ಕೊರೊನಾ ಪಾಸಿಟಿವ್ -Vishwanews24

Featured, ರಾಜ್ಯ ನ್ಯೂಸ್

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್‍ಗೆ ಕೊರೊನಾ ಪಾಸಿಟಿವ್ -Vishwanews24

ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವಿಟ್ಟರ್‍ ನಲ್ಲಿ ತಿಳಿಸಿರುವ ಜಮೀರ್ ಅಹ್ಮದ್, ಸಣ್ಣ ಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೆ. ಇದೀಗ ವರದಿಯಲ್ಲಿ ಪಾಸಿಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವೈದ್ಯರ ಸಲಹೆಯ ಮೇರೆಗೆ ಹೋ ಕ್ವಾರಂಟೈನ್‍ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ಕೂಡ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಬೆಂಗಳೂರು : ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್‌ಡೌನ್ ಘೋಷಣೆ..Vishwanews24