Featured

ಕಾಂಗ್ರೆಸ್ ಸಂಸದರ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲ್ಲ: ಸಿದ್ದರಾಮಯ್ಯ – Vishwanews24

ನವದೆಹಲಿ : ಕಾಂಗ್ರೆಸ್ ಸಂಸದರ ಕ್ಷೇತ್ರಗಳನ್ನು ಜೆಡಿಎಸ್‍ ಗೆ ಬಿಟ್ಟುಕೊಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳುವುದರ ಮೂಲಕ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಕ್ಷೇತ್ರ ಕಾಂಗ್ರೆಸ್ ನ ಪಾಲಾಗುವುದು ಖಚಿತ ಎನ್ನಲಾಗಿದೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ‘ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸಬೇಡಿ ಎಂದಿದ್ದೇನೆ. ವರಿಷ್ಠರಿಗೆ ಹಾಲಿ ಸಂಸದರಿಗೆ ಟಿಕೆಟ್ ನೀಡುವ ಬಗ್ಗೆ ಮಾತನಾಡಿದ್ದೇನೆ. ಸ್ಕ್ರೀನಿಂಗ್ ಸಮಿತಿ ಅಜೆಂಡಾ ಗೊತ್ತಿಲ್ಲ. ರಾಜ್ಯದಿಂದ ಪಟ್ಟಿ ಬಂದಿದೆ ಆ ಪಟ್ಟಿ ಆಧರಿಸಿ ಚರ್ಚೆ ನಡೆಸಿದ್ದೇನೆ. ಹಾಲಿ ಸಂಸದರ ಕ್ಷೇತ್ರಗಳು ಹೊರತು ಪಡಿಸಿ ಚರ್ಚೆ ಮಾಡುತ್ತೇವೆ’ ಎಂದು ಹೇಳಿದ್ದಾರೆ.

ಇದೇ ವೇಳೆ ಮಂಡ್ಯದಿಂದ ಸುಮಲತಾ ಅವರಿಗೆ ಸಿದ್ದರಾಮಯ್ಯ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಸುಮಲತಾಗೆ ಕಾಂಗ್ರೆಸ್​ನಿಂದ ಟಿಕೆಟ್​ ನೀಡುವುದಿಲ್ಲ ಎಂದು ಹೇಳಿದ್ದೇ ನಾನು. ಅಲ್ಲಿನ ಸ್ಪರ್ಧೆಯ ಬಗ್ಗೆ ಈ ಮೊದಲೇ ನಿರ್ಧಾರವಾಗಿತ್ತು. ಹಾಗಿದ್ದಮೇಲೆ ನಾನ್ಯಾಕೆ ಸುಮಲತಾಗೆ ಪರೋಕ್ಷ ಬೆಂಬಲ ನೀಡುತ್ತೇನೆ? ಹಾಗೇನಾದರೂ ಇದ್ದಿದ್ದರೆ ನೇರವಾಗೇ ಹೇಳುತ್ತಿದ್ದೆ ಎಂದರು.

ಕಾಂಗ್ರೆಸ್ ಹಾಲಿ ಸಂಸದರ ಕ್ಷೇತ್ರಗಳನ್ನು ಬಿಟ್ಟುಕೊಡವುದಿಲ್ಲ ಎಂಬ ಸ್ಪಷ್ಟ ಸಂದೇಶದ ನಡುವೆಯೂ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಕ್ಷೇತ್ರಗಳಿಗೆ ಜೆಡಿಎಸ್ ಒತ್ತಡ ಹಾಕುತ್ತಿರುವ ಬಗ್ಗೆಯೂ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದೆ.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

22 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago