Featured

ಕಾಂಗ್ರೆಸ್ ಸರಕಾರ ಬಂದ ರಾಜ್ಯದಲ್ಲಿ ಹಿಂದೂಗಳ ಮೇಲೆ ನಿರಂತರ ಹಲ್ಲೆ , ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗಿದೆ : ಆರ್.ಅಶೋಕ್  – Vishwanews24

ಕಾಂಗ್ರೆಸ್ ಸರಕಾರ ಬಂದ ರಾಜ್ಯದಲ್ಲಿ ಹಿಂದೂಗಳ ಮೇಲೆ ನಿರಂತರ ಹಲ್ಲೆ , ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗಿದೆ : ಆರ್.ಅಶೋಕ್

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ, ಟಿಪ್ಪು ಸಿದ್ಧಾಂತ ಇರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಗಳು, ಇಸ್ಲಾಮಿಕ್ ಕಾರ್ಯಕರ್ತರು ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರಿಂದ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ಅವಹೇಳನ, ಧಮ್ಕಿ, ಭಯೋತ್ಪಾದನಾ ಚಟುವಟಿಕೆ, ಬಾಂಬ್ ಹಾಕುವ ಘಟನೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು.

ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಗಂಭೀರ ವಿಚಾರ ಮತ್ತು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು. ನಿನ್ನೆ ವಿದ್ಯಾರಣ್ಯಪುರದಲ್ಲಿ ರಾಮನವಮಿ ಇತ್ತು. ರಾಮ ಈ ದೇಶದ ಆದರ್ಶ ಪುರುಷ. ಶ್ರೀರಾಮ ಮಂದಿರವೂ ನಿರ್ಮಾಣವಾಗಿದೆ. ಇಂಥ ಸಂದರ್ಭದಲ್ಲಿ “ಜೈ ಶ್ರೀರಾಮ್” ಎಂದು ಕೂಗಿದ್ದನ್ನು ಆಕ್ಷೇಪಿಸಿ ಮುಸ್ಲಿಂ ಗೂಂಡಾಗಳು ಅವರ ಮೇಲೆ ಹಲ್ಲೆ ನಡೆಸಿ “ಅಲ್ಲಾ ಹೋ ಅಕ್ಬರ್” ಕೂಗಬೇಕು ಎಂದು ಧಮ್ಕಿ ಹಾಕಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ. ಇದರಿಂದ ನಾವು ಹಿಂದೂಸ್ತಾನದಲ್ಲಿ ಇದ್ದೇವಾ ಅಥವಾ ಪಾಕಿಸ್ತಾನದಲ್ಲಿ ಇದ್ದೇವಾ ಎಂಬ ಸಂದೇಹ ಕಾಡುವಂತಾಗಿದೆ ಎಂದು ನುಡಿದರು.

 

ಹಿಂದೂಗಳನ್ನು ಈ ಥರ ಬೈದು ಬೈದು ರಾಜ್ಯದಲ್ಲಿ ಮುಸ್ಲಿಂ ಭಯೋತ್ಪಾದನಾ ಚಟುವಟಿಕೆಗಳು ಜಾಸ್ತಿಯಾಗಿವೆ. ಶ್ರೀರಾಮ ಮಂದಿರಕ್ಕೆ ಹೋಗುವ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಲಾಗುತ್ತಿದೆ. ಮಂಡ್ಯದಲ್ಲಿ ಹಾರಾಡುತ್ತಿದ್ದ ಹನುಮಧ್ವಜವನ್ನು ಕಿತ್ತು ಹಾಕಿದ್ದೀರಿ. ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಕರ್ನಾಟಕದಲ್ಲಿ ಹಿಂದೂಗಳು ಭಯದಿಂದ ಬದುಕುವಂಥ ವಾತಾವರಣವನ್ನು ಸಿದ್ದರಾಮಯ್ಯ ಆಂಡ್ ಗ್ಯಾಂಗ್ ಮಾಡುವುದನ್ನು ಖಂಡಿಸುವುದಾಗಿ ಹೇಳಿದರು.

ಇಂಥ ಘಟನೆಗಳಿಗೆ ಕಾರಣವಾದ ಈ ಸರಕಾರ ಬಹಳ ದಿನ ಉಳಿಯುವುದಿಲ್ಲ. ಇದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ಸರಕಾರ ಎಂದು ಬ್ರಾಂಡ್ ಆಗಿದೆ. ಇದು ಜನಕ್ಕೆ ಗೊತ್ತಾಗಿದೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಜನರು ಇವರಿಗೆ ಪಾಠ ಕಲಿಸುತ್ತಾರೆ ಎಂದರು. ನಿಮ್ಮ ಏಕೈಕ ಎಂಪಿ, ಎಐಸಿಸಿ ಅಧ್ಯಕ್ಷ ಖರ್ಗೆಯವರು ಸಂಸತ್ತಿನಲ್ಲಿ ಏನು ಮಾಡಿದ್ದಾರೆ? ಕರ್ನಾಟಕದ ಪರವಾಗಿ ಬಾಯಿ ಬಿಟ್ಟೇ ಇಲ್ಲ; ನೀವೇನು ಮಾಡಿದ್ದೀರಿ ಎಂದು ರಾಜ್ಯದ ಜನರು ಕೇಳುತ್ತಿದ್ದಾರೆ ಎಂದು ತಿಳಿಸಿದರು.

ಹಿಂದೂಗಳ ರಕ್ಷಣೆ ಬಗ್ಗೆ ಆತಂಕ ಉಂಟಾಗಿದೆ. ದರಿದ್ರ ಸರಕಾರ ಇದು. ನಯಾಪೈಸೆ ಹಣ ಇಲ್ಲ. ಮೇ ಜೂನ್ ನಂತರ ಸಂಬಳ ಕೊಡಲು ದುಡ್ಡಿಲ್ಲ ಎಂಬ ಸ್ಥಿತಿ ಬಂದಿದೆ. ಪಿಂಚಣಿ, ಸ್ಕಾಲರ್‍ಶಿಪ್ ಕೊಟ್ಟಿಲ್ಲ. ಇದರ ಜೊತೆಗೆ ಕರ್ನಾಟಕದ ಶಾಂತಿಯ ತೋಟವನ್ನು ಮತಕ್ಕಾಗಿ ಹಾಳು ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇದರ ವಿರುದ್ಧ ಹೋರಾಟ ಮುಂದುವರಿಸಲಿದ್ದೇವೆ ಎಂದು ಎಚ್ಚರಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago