Featured

ಕಾಂಗ್ರೆಸ್ ಸರ್ಕಾರದಲ್ಲಿಯೂ 40% ಕಮಿಷನ್ ಮುಂದುವರಿದಿದೆ :  ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ – Vishwanews24

ಕಾಂಗ್ರೆಸ್ ಸರ್ಕಾರದಲ್ಲಿಯೂ 40% ಕಮಿಷನ್ ಮುಂದುವರಿದಿದೆ :  ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ

ಬೆಂಗಳೂರು: 40% ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿಯೂ ಮುಂದುವರಿದಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ ಮಾಡಿದ್ದಾರೆ.

ಚಾಮರಾಜಪೇಟೆಯ ಗುತ್ತಿಗೆದಾರರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳಲ್ಲಿ ಕರೆದಿರೋ ಪ್ಯಾಕೇಜ್ ಟೆಂಡರ್ ಅನ್ನು ರದ್ದುಗೊಳಿಸುವಂತೆ ಆಗ್ರಹಿಸಿದರು. ಜೊತೆಗೆ ಪ್ರತಿಯೊಂದು ಕಾಮಗಾರಿಗೂ ಪ್ರತ್ಯೇಕ ಟೆಂಡರ್ ಕರೆಯಬೇಕು ಎಂದು ಇದೇ ವೇಳೆ ಒತ್ತಾಯ ಮಾಡಿದರು.

ತಕ್ಷಣ ಪ್ಯಾಕೇಜ್ ಸಿಸ್ಟಮ್ ಸ್ಟಾಪ್ ಮಾಡಿ ಪ್ರತ್ಯೇಕ ಟೆಂಡರ್ ಕರೆಯಬೇಕು. ಕೋಲಾರದಲ್ಲಿ ಪ್ಯಾಕೇಜ್ ಟೆಂಡರ್ ಕರೆದಿದ್ದಾರೆ ಬೇರೆ ಜಿಲ್ಲೆಗಳಲ್ಲೂ ಕರೆದಿದ್ದಾರೆ. ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಶುರುವಾಗಿದೆ. ಅಧಿಕಾರಿಗಳು ದುಡ್ಡು ಕಲೆಕ್ಟ್ ಮಾಡಿ ರಾಜಕಾರಣಿಗಳಿಗೆ ಕೊಡುತ್ತಿದ್ದಾರೆ. ಈ ಹಿಂದೆ ರಾಜಕಾರಣಿಗಳು ನೇರವಾಗಿ ಕಮಿಷನ್ ತೆಗೆದುಕೊಳ್ಳುತ್ತಿದ್ದರು. ಈಗ ಅಧಿಕಾರಿಗಳು ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ 40% ಕಮಿಷನ್ ಈಗಲೂ ಮುಂದುವರಿದಿದೆ ಎಂದು ದೂರಿದ್ದಾರೆ.

ಅರ್ಹ ಗುತ್ತಿಗೆದಾರರಿಗೆ ಅನ್ಯಾಯ: ವಿವಿಧ ಇಲಾಖೆಯಲ್ಲಿ ನಡೆಯುತ್ತಿರುವ ಅನಾವಶ್ಯಕ ಪ್ಯಾಕೇಜ್ ಟೆಂಡರ್‍ಗಳನ್ನು ಕೂಡಲೇ ಸರ್ಕಾರ ರದ್ದುಗೊಳಿಸಬೇಕು. ಈಗಾಗಲೇ ಹಲವು ಬಾರಿ ಸಿಎಂ ಅವರನ್ನ ಭೇಟಿ ಮಾಡಿದ್ದೇವೆ. ಪ್ಯಾಕೇಜ್ ಟೆಂಡರ್ ರದ್ದುಮಾಡುವಂತೆ ಮನವಿ ಮಾಡಿದ್ದೇವೆ. ಹತ್ತಾರು ಪತ್ರ ಬರೆದು ಸಿಎಂಗೆ ಮನವಿ ಮಾಡಿದ್ದೇವೆ. ಮುಖ್ಯ ಎಂಜಿನಿಯರ್ ಅವರನ್ನ ಪ್ರಶ್ನೆ ಮಾಡಿದ್ರೆ ಮೇಲಾಧಿಕಾರಿಗಳ ಕಡೆ ತೋರಿಸುತ್ತಾರೆ. ಅವರನ್ನ ಕೇಳಿದ್ರೆ ಸಚಿವರು, ಶಾಸಕರ ಕಡೆ ಬೊಟ್ಟು ಮಾಡಿ ತೋರಿಸುತ್ತಾರೆ ಎಂದರು.

ಪೊಲೀಸ್ ವಸತಿ ಗೃಹ ಅಭಿವೃದ್ಧಿ ನಿಗಮ, ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಹಲವು ಇಲಾಖೆಗಳಲ್ಲಿ ಪ್ಯಾಕೇಜ್ ಟೆಂಡರ್ ಆಹ್ವಾನ ಬಂದಿದೆ. ಇದರಿಂದ ಸ್ಥಳೀಯ ಗುತ್ತಿಗೆದಾರರಿಗೆ ಮೋಸಗಳಾಗುತ್ತಿದೆ. ನೆರೆ ರಾಜ್ಯದ ಗುತ್ತಿಗೆ ಅನಕೂಲ ಮಾಡಿಕೊಡಲು ಪ್ಯಾಕೇಜ್ ಟೆಂಡರ್ ಮಾಡುತ್ತಿದ್ದಾರೆ. ಪ್ಯಾಕೇಜ್ ಟೆಂಡರ್ ಪದ್ಧತಿ ಭ್ರಷ್ಟಾಚಾರಕ್ಕೆ ಆಸ್ಪದವಾಗಿದೆ. ತಮ್ಮ ಅಪ್ತರಾದ ಗುತ್ತಿಗೆ ಕಾಮಗಾರಿ ನೀಡಲು ಮುಂದಾಗಿದ್ದಾರೆ. ಇದರಿಂದ ಅರ್ಹ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ. ಎಲ್ಲಾ ರೀತಿಯ ಕಾಮಗಾರಿಗಳ ಟೆಂಡರ್ ಮೂಲಕ ಹಂಚಿಕೆ ಮಾಡಿದ್ರೆ ನ್ಯಾಯ ಸಿಗುತ್ತೆ ಎಂದಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago