ಮೈಸೂರು,: ಭಾರತೀಯ ಜನತಾ ಪಕ್ಷವೂ ಉಗ್ರರ ವಿರುದ್ದ ಒಂದೋ, ಎರಡೋ ಸರ್ಜಿಕಲ್ ಸ್ಟ್ರೈಕ್ ಮಾಡಿ ಬೀಗುತ್ತಿದ್ದಾರೆ. ಮಾತ್ರವಲ್ಲದೇ ತಾವೇ ಸರ್ಜಿಕಲ್ ಸ್ಟ್ರೈಕ್ ನ್ನು ಮಾಡಿದಂತೆ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ನಮ್ಮ ಆಡಳಿತ ಅವಧಿಯಲ್ಲೂ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದೆವು. ಆದರೆ ಈ ಬಗ್ಗೆ ನಮಗೆ ಪ್ರಚಾರ ಆಗತ್ಯವಿರಲಿಲ್ಲ. ಯುಪಿಎ ಅವಧಿಯಲ್ಲಿ ಎರಡು ಮೂರಲ್ಲ ಸುಮಾರು 12-13 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮಾಜಿ ಪ್ರಧಾನಿ, ದಿವಂಗತೆ ಇಂದಿರಾ ಗಾಂಧಿ ಸರ್ಕಾರದ ಅವಧಿಯಲ್ಲಿ ಬಾಂಗ್ಲಾ ಯುದ್ಧದಲ್ಲಿ ಪಾಕಿಸ್ತಾನ ಶರಣಾಗಿದ್ದು ಗೊತ್ತಿಲ್ಲವಾ? ಅದಕ್ಕಿಂತಲು ದೊಡ್ಡದಾ ಈ ಸರ್ಜಿಕಲ್ ಸ್ಟ್ರೈಕ್? ದೇಶದ ರಕ್ಷಣೆ ವಿಚಾರವನ್ನು ಕಾಂಗ್ರೆಸ್ ಯಾವತ್ತೂ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಬಿಜೆಪಿಯವರು ಯಾವತ್ತೂ ಅಭಿವೃದ್ಧಿ ವಿಚಾರದಲ್ಲಿ ರೈತರ ವಿಚಾರದಲ್ಲಿ ಮತ ಕೇಳಿದ್ದಾರಾ? ಭಾವನಾತ್ಮಕ ವಿಚಾರ ಇಟ್ಟುಕೊಂಡು ಅವರು ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು
ಬಿಜೆಪಿಯೂ ಎಂದಿಗೂ ಅಭಿವೃದ್ಧಿ ವಿಚಾರದಲ್ಲಿ ಮತ ಕೇಳಿಲ್ಲ, ರೈತರ ವಿಚಾರವನ್ನು ಮುಂದಿಟ್ಟುಕೊಂಡು ಮತ ಯಾಚಿಸಿಲ್ಲ. ಯಾಕೆಂದರೆ ಅವರಿಗೆ ಅಭಿವೃದ್ದಿ ಬೇಕಿಲ್ಲ. ಭಾವನಾತ್ಮಕ ವಿಚಾರಗಳನ್ನು ದಾಳವಾಗಿ ಬಳಸಿ ಮತ ಗಳಿಸೋದು ಬಿಜೆಪಿ ತಂತ್ರ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…