ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್‌ ಪತನ : ಸಚಿವ ನಾಗೇಂದ್ರ ರಾಜೀನಾಮೆ – vishwanews24

Featured, ರಾಜ್ಯ ನ್ಯೂಸ್

ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್‌ ಪತನ : ಸಚಿವ ನಾಗೇಂದ್ರ ರಾಜೀನಾಮೆ

ಬೆಂಗಳೂರು:ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನವಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸರ್ಕಾರ ಸೂಚಿಸಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಸಿಎಂ, ಡಿಸಿಎಂ ಮಾತುಕತೆ ನಡೆಸಿದ ಬಳಿಕ ನಾಗೇಂದ್ರ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಜೂನ್ 10 ರವರೆಗೆ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿಗೆ  – vishwanews24

ಈಗಾಗಲೇ ಪ್ರಕರಣ ಸಂಬಂಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ. ಈ ಪ್ರಕರಣದ ತನಿಖೆ ಸಿಬಿಐಗೆ ಹೋದಲ್ಲಿ ಸಚಿವ ಸ್ಥಾನದಲ್ಲಿ ಮುಂದುವರೆಯುವುದು ಕಷ್ಟ. ಬಳಿಕ ರಾಜೀನಾಮೆ ನೀಡಿದರೆ ಸರ್ಕಾರ, ಪಕ್ಷಕ್ಕೆ ಮುಜುಗರವಾಗಲಿದೆ. ಅದರ ಬದಲು ಈಗಲೇ ರಾಜೀನಾಮೆ ಕೊಡುವಂತೆ ಸೂಚನೆ ನೀಡಲಾಗಿತ್ತು ಎನ್ನಲಾಗಿದೆ.

Leave a Reply