ಬೆಂಗಳೂರು:ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸರ್ಕಾರ ಸೂಚಿಸಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಸಿಎಂ, ಡಿಸಿಎಂ ಮಾತುಕತೆ ನಡೆಸಿದ ಬಳಿಕ ನಾಗೇಂದ್ರ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಈಗಾಗಲೇ ಪ್ರಕರಣ ಸಂಬಂಧ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಈ ಪ್ರಕರಣದ ತನಿಖೆ ಸಿಬಿಐಗೆ ಹೋದಲ್ಲಿ ಸಚಿವ ಸ್ಥಾನದಲ್ಲಿ ಮುಂದುವರೆಯುವುದು ಕಷ್ಟ. ಬಳಿಕ ರಾಜೀನಾಮೆ ನೀಡಿದರೆ ಸರ್ಕಾರ, ಪಕ್ಷಕ್ಕೆ ಮುಜುಗರವಾಗಲಿದೆ. ಅದರ ಬದಲು ಈಗಲೇ ರಾಜೀನಾಮೆ ಕೊಡುವಂತೆ ಸೂಚನೆ ನೀಡಲಾಗಿತ್ತು ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…