ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶವನ್ನು ಒಡೆಯಲು ಬಿಡಲ್ಲ, ದೇಶ ಬಿಟ್ಟು ಓಡಿ ಹೋಗಿರುವವರನ್ನು ಬಂಧಿಸಲಾಗುವುದು :ರಾಹುಲ್ ಗಾಂಧಿ

Featured, ಜಿಲ್ಲೆ, ರಾಜ್ಯ ನ್ಯೂಸ್

ಹಾವೇರಿ: ಹಾವೇರಿ ಸಮಾವೇಶದಲ್ಲಿ ಮಾತನಾಡಿದ ಅವರು, 2019ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ಬಡ ವರ್ಗದ ಜನರಿಗೆ ಕನಿಷ್ಠ ಆದಾಯವನ್ನು ನೀಡಲಾಗುತ್ತದೆ. ಪ್ರತಿ ತಿಂಗಳು ಬಡಜನರ ಖಾತೆಗೆ ನೇರವಾಗಿ ನಿಮ್ಮ ಹಣ ಬರಲಿದೆ. ನರೇಂದ್ರ ಮೋದಿ ಅವರು ಚೋಕ್ಸಿ, ಅಂಬಾನಿ, ನೀರವ್ ಮೋದಿ ಖಾತೆಗೆ ಸಾವಿರಾರು ಕೋಟಿ ಹಾಕಿದ್ದಾರೆ. ಛತ್ತೀಸ್‍ಗಢದಲ್ಲಿ ನಾವು ರೈತರಿಗೆ ನೇರವಾಗಿ ಖಾತೆಗೆ ಹಣ ನೀಡುತ್ತೇವೆ ಅಂದಾಗ ಮೋದಿ ಸರ್ಕಾರ ತಮ್ಮ ಬಜೆಟ್ ನಲ್ಲಿ ರೈತರಿಗೆ 2 ಸಾವಿರ ರೂ. ನೀಡಿದ್ರು. ಅಂದ್ರೆ ದಿನಕ್ಕೆ ರೈತರಿಗೆ ಮೂರುವರೆ ರೂಪಾಯಿ ನೀಡುತ್ತಿದ್ದಾರೆ. ಅಂಬಾನಿ, ಅದಾನಿಗೆ 30 ಸಾವಿರ ಕೋಟಿ ನೀಡುತ್ತಾರೆ ಇದು ಯಾವುದು ಲೆಕ್ಕ. ನಾವು ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸವನ್ನು ಮಾಡಲು ಹೋಗಲ್ಲ. ಕನಿಷ್ಠ ಮಾಸಿಕ ವೇತನವನ್ನು ನೀಡುತ್ತೇವೆ ಎಂದು ಘೋಷಿಸಿದ್ದಾರೆ.

ಮೋದಿಜೀ, ಹಿಂದೂಸ್ತಾನವನ್ನು ಎರಡು ಭಾಗವಾಗಿ ವಿಂಗಡನೆ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಮೊದಲನೇಯ ಹಿಂದೂಸ್ತಾನದಲ್ಲಿ ಅನಿಲ್ ಅಂಬಾನಿ, ವಿಜಯ್ ಮಲ್ಯ, ಚೋಕ್ಸಿ, ನೀರವ್ ಮೋದಿ ಶ್ರೀಮಂತ ವರ್ಗದ ಜನರಿದ್ದಾರೆ. ಇನ್ನೊಂದು ವರ್ಗದಲ್ಲಿ ಬಡವರು, ನಿರುದ್ಯೋಗಿಗಳು, ರೈತರನ್ನು ಒಳಗೊಂಡಿದೆ. ಆದ್ರೆ ಕಾಂಗ್ರೆಸ್ ದೇಶವನ್ನು ಒಡೆಯಲು ಬಿಡಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರತ್ತಿದ್ದಂತೆ ದೇಶ ಬಿಟ್ಟು ಓಡಿ ಹೋಗಿರುವವರನ್ನು ಬಂಧಿಸಲಾಗುವುದು. ಮೋದಿಯವರೇ ಇಂತಹ ಕಳ್ಳರಿಗೆ ಸಹಾಯ ಮಾಡಿ, ನಾವು ಬಡು ಜನರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಬ್ಯಾಂಕ್ ನಲ್ಲಿರುವ ಹಣ ಕೇವಲ 15 ಜನರ ಖಾತೆಗೆ ಹೋಗುತ್ತಿದೆ ಎಂದು ಆರೋಪಿಸಿದರು.

ಪ್ರತಿದಿನ ನಿಮ್ಮ ಹಣವನ್ನು ಕಿತ್ತುಕೊಳ್ಳುವ ಕೆಲಸ ನಡೆಯುತ್ತಿದೆ. ತೆರೆಯಲ್ಲಿ ನಿಮ್ಮ ಜಮೀನು ಕಿತ್ತುಕೊಳ್ಳುವ ಕೆಲಸವನ್ನು ಮೋದಿ ಸರ್ಕಾರ ಮಾಡುತ್ತಿದೆ. ಕಾಂಗ್ರೆಸ್ ಕರ್ನಾಟಕ, ದೇಶದ ರೈತರ ಪರವಾಗಿ ಮಾಡಿದೆ. ಐದು ವರ್ಷಗಳಿಂದ ದೇಶದ ಯುವ ಜನತೆಯನ್ನು ಮೂರ್ಖರನ್ನಾಗಿ ಮಾಡಲು ಪ್ರಧಾನಿಗಳು ಪ್ರಯತ್ನಿಸುತ್ತಿದ್ದಾರೆ. ಮೋದಿಯವರ ಮೂರ್ಖತನದ ನಿರ್ಧಾರಗಳಿಂದ ದೇಶದ ಜನರು ಬೇಸತ್ತಿದ್ದಾರೆ. ನೋಟ್ ಬ್ಯಾನ್ ಮತ್ತು ಜಿಎಸ್‍ಟಿ ಯಿಂದ ದೇಶಕ್ಕೆ ಸಾಕಷ್ಟು ನಷ್ಟಕ್ಕೆ ಒಳಗಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಜಿಎಸ್‍ಟಿಯನ್ನು ತೆಗೆದು ಸರಳ ತೆರಿಗೆ ನಿಯಮಗಳ್ನು ಜಾರಿಗೆ ತರಲಾಗುವುದು ಎಂದು ಆಶ್ವಾಸನೆ ನೀಡಿದರು.

ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಸರ್ಕಾರ ರಚನೆ ಮಾಡಿದ್ದು, ಎರಡು ಪಕ್ಷಗಳು ಜೊತೆಯಾಗಿ ಕೆಲಸ ಮಾಡುತ್ತೇವೆ. ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ದೇಶದ ಏಳಿಗೆಗಾಗಿ ಕೆಲಸ ಮಾಡಬೇಕಿದೆ. ಕರ್ನಾಟಕದಲ್ಲಿಯ ಮೈತ್ರಿ ಸರ್ಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿ ರಾಹುಲ್ ಗಾಂಧಿ ಮಾತು ಮುಗಿಸಿದರು.