ಕಾಂಗ್ರೆಸ್‌ ಹಿರಿಯ ನಾಯಕ ಎಕೆ ಆಂಟನಿ ಪುತ್ರ ಅನಿಲ್‌ ಆಂಟನಿ ಬಿಜೆಪಿಗೆ ಸೇರ್ಪಡೆ – Vishwanews24

Featured, ರಾಷ್ಟ್ರ ನ್ಯೂಸ್

ಕಾಂಗ್ರೆಸ್‌ ಹಿರಿಯ ನಾಯಕ ಎಕೆ ಆಂಟನಿ ಪುತ್ರ ಅನಿಲ್‌ ಆಂಟನಿ ಬಿಜೆಪಿಗೆ ಸೇರ್ಪಡೆ

ನವದೆಹಲಿ : ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಯುಪಿಎ ಅವಧಿಯಲ್ಲಿ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಕೆ ಆಂಟನಿ ಅವರ ಪುತ್ರ ಅನಿಲ್‌ ಆಂಟನಿ ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಅದರೊಂದಿಗೆ ಕೇರಳ ಬಿಜೆಪಿಗೆ ಅತಿದೊಡ್ಡ ಬಲ ಸಿಕ್ಕಂತಾಗಿದೆ. ಕೇರಳ ಕಾಂಗ್ರೆಸ್‌ನ ಮಾಧ್ಯಮ ಸಂಯೋಜಕರಾಗಿದ್ದ ಅನಿಲ್‌ ಆಂಟನಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗುಜರಾತ್‌ ಗಲಭೆಯ ಕುರಿತಾಗಿ ಬಿಬಿಸಿ ಮಾಡಿದ್ದ ಸಾಕ್ಷ್ಯಚಿತ್ರವನ್ನು ಬಲವಾಗಿ ವಿರೋಧಿಸಿದ್ದರು.

ಅದರ ಬೆನ್ನಲ್ಲಿಯೇ ಕಾಂಗ್ರೆಸ್‌ ಪಕ್ಷದಿಂದಲೇ ಅವರು ಟೀಕೆ ಎದುರಿಸಿದ್ದರು. ಇದರಿಂದಾಗಿ ಬೇಸರಗೊಂಡು ಕಾಂಗ್ರೆಸ್‌ ಪಕ್ಷದ ಎಲ್ಲಾ ಸ್ಥಾನಕ್ಕೂ ರಾಜೀನಾಮೆ ನೀಡಿ ಹೊರಬಂದಿದ್ದ ಅನಿಲ್‌ ಆಂಟನಿ ಗುರುವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಪೀಯುಷ್‌ ಗೋಯೆಲ್‌ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

ಉಡುಪಿ: ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್ : ಅಭಿಮಾನಿಗಳಿಂದ  ಇಂದು ಸಂಜೆ ತುರ್ತು ಸಭೆ – Vishwanews24

ಬಿಜೆಪಿ ಸೇರ್ಪಡೆ ಕಾರ್ಯಕ್ರಮದ ವೇಳೆ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್‌ ಕೂಡ ಹಾಜರಿದ್ದರು. ಬಿಬಿಸಿ ಸಾಕ್ಷ್ಯಚಿತ್ರ ವಿರೋಧಿ ಅವರು ಮಾಡಿದ್ದ ಟ್ವೀಟ್‌ಗೆ ಕಾಂಗ್ರೆಸ್‌ ಕಿಡಿಕಾರಿದ್ದ ಹಿನ್ನಲೆಯಲ್ಲಿ, ಕಳೆದ ಜನವರಿಯಲ್ಲಿ ಅವರು ಕಾಂಗ್ರೆಸ್‌ ಪಕ್ಷದ ಎಲ್ಲಾ ಹುದ್ದೆಗೆ ರಾಜೀನಾಮೆ ನೀಡಿದ್ದರು.

Leave a Reply