ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಶಾಸಕ ವಾಸು (72) ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ನಿಧನರಾಗಿದ್ದಾರೆ
ಮೈಸೂರು ಮೇಯರ್ ಆಗಿದ್ದ ವಾಸು ಬಳಿಕ ಶಾಸಕರಾದರು. ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಮಾಲೀಕರಾಗಿರುವ ಇವರು ‘ಪ್ರಜಾನುಡಿ’ ಪತ್ರಿಕೆ ಮಾಲೀಕರಾಗಿದ್ದರು. ಮೈಸೂರು ನಗರದ ಚಾಮರಾಜ ಕ್ಷೇತ್ರದಲ್ಲಿ 2014ರಲ್ಲಿ ಶಾಸಕರಾಗಿದ್ದ ವಾಸು 2019ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿತ್ತು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ವಿರುದ್ದ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುವ ಮೂಲಕ ಸುದ್ದಿಯಾಗಿದ್ದರು.
ಈ ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿಯವರಿಗೆ ಆಪ್ತರಾಗಿದ್ದ ವಾಸುರವರು ಮೊಯ್ಲಿ ಅವಧಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…