ಮಿರ್ಜಾಪುರ್(ಉತ್ತರ ಪ್ರದೇಶ),: ಈ ಹಿಂದೆ ಆಡಳಿತ ನಡೆಸಿದ ವಿರೋಧ ಪಕ್ಷಗಳ ಸರ್ಕಾರಗಳು ಜನರನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ಅಭಿವೃದ್ಧಿ ಯೋಜನೆಗಳನ್ನು ವಿಳಂಬ ಮಾಡಿದೆವು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ್‍ನಲ್ಲಿ ಜನಸಾಗರ ಕಾಲುವೆ ಯೋಜನೆ ಉದ್ಘಾಟನೆ ಮತ್ತು ಮಿರ್ಜಾಪುರ್ ಮೆಡಿಕಲ್ ಕಾಲೇಜಿಗೆ ಶಿಲ್ಯಾಸ ನೆರವೇರಿಸಿದ ನಂತರ ಅವರು ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಸೇರದಂತೆ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. ಇಂದು ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ವಿರೋಧ ಪಕ್ಷಗಳು ತಮ್ಮ ಅಧಿಕಾರಾವಧಿಯಲ್ಲಿ ನೀರಾವರಿ ಯೋಜನೆಗಳನ್ನು ಏಕೆ ಪೂರೈಸಲಿಲ್ಲ ಎಂದು ಪ್ರಶ್ನಿಸಿದ ಮೋದಿ, ಇವರು ಅಧಿಕಾರದಲ್ಲಿ ಇರುವಷ್ಟು ಕಾಲ ಅದು ಅಪೂರ್ಣವಾಗಿಯೇ ಇತ್ತು ಎಂದು ಟೀಕಿಸಿದರು. ಯೋಜನೆಗಳನ್ನು ಅಪೂರ್ಣಗೊಳಿಸಿದ್ದೇ ಹಿಂದಿನ ಸರ್ಕಾರಗಳ ಸಾಧನೆ ಎಂದು ಲೇವಟಿ ಮಾಡಿದ ಅವರು, 50 ವರ್ಷಗಳ ಕಾಲ ದೇಶ ಆಳಿದ ಕಾಂಗ್ರೆಸ್ ಪಕ್ಷ ಮಾಡದ ಸಾಧನೆಯನ್ನು ಎನ್‍ಡಿಎ ಸರ್ಕಾರ ಕೇವಲ ನಾಲ್ಕೇ ವರ್ಷಗಳಲ್ಲಿ ಪೂರ್ಣಗೊಳಿಸಿದೆ ಎಂದು ಮೋದಿ ಹೆಮ್ಮೆಯಿಂದ ಹೇಳಿಕೊಂಡರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…