Featured

ಕಾಂಗ್ರೆಸ್ 50 ವರ್ಷ ಮಾಡಿದ ಸಾಧನೆಯನ್ನು ನಾವು ನಾಲ್ಕೇ ವರ್ಷದಲ್ಲಿ ಮಾಡಿದ್ದೇವೆ : ಮೋದಿ

ಮಿರ್ಜಾಪುರ್(ಉತ್ತರ ಪ್ರದೇಶ),: ಈ ಹಿಂದೆ ಆಡಳಿತ ನಡೆಸಿದ ವಿರೋಧ ಪಕ್ಷಗಳ ಸರ್ಕಾರಗಳು ಜನರನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ಅಭಿವೃದ್ಧಿ ಯೋಜನೆಗಳನ್ನು ವಿಳಂಬ ಮಾಡಿದೆವು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ್‍ನಲ್ಲಿ ಜನಸಾಗರ ಕಾಲುವೆ ಯೋಜನೆ ಉದ್ಘಾಟನೆ ಮತ್ತು ಮಿರ್ಜಾಪುರ್ ಮೆಡಿಕಲ್ ಕಾಲೇಜಿಗೆ ಶಿಲ್ಯಾಸ ನೆರವೇರಿಸಿದ ನಂತರ ಅವರು ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಸೇರದಂತೆ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.  ಇಂದು ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ವಿರೋಧ ಪಕ್ಷಗಳು ತಮ್ಮ ಅಧಿಕಾರಾವಧಿಯಲ್ಲಿ ನೀರಾವರಿ ಯೋಜನೆಗಳನ್ನು ಏಕೆ ಪೂರೈಸಲಿಲ್ಲ ಎಂದು ಪ್ರಶ್ನಿಸಿದ ಮೋದಿ, ಇವರು ಅಧಿಕಾರದಲ್ಲಿ ಇರುವಷ್ಟು ಕಾಲ ಅದು ಅಪೂರ್ಣವಾಗಿಯೇ ಇತ್ತು ಎಂದು ಟೀಕಿಸಿದರು. ಯೋಜನೆಗಳನ್ನು ಅಪೂರ್ಣಗೊಳಿಸಿದ್ದೇ ಹಿಂದಿನ ಸರ್ಕಾರಗಳ ಸಾಧನೆ ಎಂದು ಲೇವಟಿ ಮಾಡಿದ ಅವರು, 50 ವರ್ಷಗಳ ಕಾಲ ದೇಶ ಆಳಿದ ಕಾಂಗ್ರೆಸ್ ಪಕ್ಷ ಮಾಡದ ಸಾಧನೆಯನ್ನು ಎನ್‍ಡಿಎ ಸರ್ಕಾರ ಕೇವಲ ನಾಲ್ಕೇ ವರ್ಷಗಳಲ್ಲಿ ಪೂರ್ಣಗೊಳಿಸಿದೆ ಎಂದು ಮೋದಿ ಹೆಮ್ಮೆಯಿಂದ ಹೇಳಿಕೊಂಡರು.

Vishwa News 24

Recent Posts

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

9 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

31 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago