Featured

ಕಾಂಗ್ರೆಸ್  75 ವರ್ಷಗಳಲ್ಲಿ ಮಾಡಿರದ ಕೆಲಸಗಳನ್ನು ನಾನು ಕೇವಲ 5 ವರ್ಷಗಳಲ್ಲಿ ಮಾಡಲು ಹೇಗೆ ಸಾಧ್ಯ? :ಪ್ರಧಾನಿ ಮೋದಿ – Vishwanews24

ನವದೆಹಲಿ, : “ನಾನು ಈ ಹಿಂದೆ ನೀಡಿದ ಭರವಸೆಗಳನ್ನೆಲ್ಲ ಈಡೇರಿಸಿದ್ದೇನೆ, ಎಲ್ಲಾ ಕೆಲಸಗಳನ್ನು ಮಾಡಿ ಮುಗಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿಲ್ಲ. ಕಾಂಗ್ರೆಸ್ ಕಳೆದ 75 ವರ್ಷಗಳಲ್ಲಿ ಮಾಡಿರದ ಕೆಲಸಗಳನ್ನು ಕೇವಲ 5 ವರ್ಷಗಳಲ್ಲಿ ಮಾಡಿ ಮುಗಿಸಲು ಹೇಗೆ ಸಾಧ್ಯ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.

ಬಹಳಷ್ಟನ್ನು ಮಾಡಿದ್ದೇವೆ, ಇನ್ನೂ ಬಹಳಷ್ಟನ್ನು ಮಾಡುವ ಸಾಮರ್ಥ್ಯವಿದೆ ಮತ್ತು ಇದಕ್ಕಾಗಿ ನಿರಂತರ ಪ್ರಯತ್ನಗಳ ಅಗತ್ಯವಿದೆ. ಹೀಗಾಗಿ ನಿಮ್ಮ ಆಶೀರ್ವಾದಗಳ ಅಗತ್ಯವೂ ನನಗಿದೆ ”ಎಂದು ಅವರು ಹೇಳಿದರು.

 

ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಬಾಕಿ ಉಳಿದಿವೆ. ಇನ್ನೂ ಸಾಕಷ್ಟು ಕೆಲಸ ಮಾಡುವ ಸಾಧ್ಯತೆ ಇದೆ. ಅದಕ್ಕಾಗಿ ನಿರಂತರ ಶ್ರಮ ಮಾಡುವ ಅಗತ್ಯವಿದೆ. ಮತ್ತು ಇದಕ್ಕಾಗಿ ನನಗೆ ಜನರ ಆಶೀರ್ವಾದ ಬೇಕು” ಎಂದು ಮೋದಿ ಹೇಳಿದ್ದಾರೆ. ಹೇಳಿದ ಕೆಲಸ ಪೂರ್ಣಗೊಳಿಸಲು ಮುಂದಿನ ಅವಧಿಯೂ ಬೇಕಾಗಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಮೋದಿ ಅವರು ಭಾಷಣದುದ್ದಕ್ಕೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಭಯೋತ್ಪಾದನೆ, ಬೆಲೆ ಏರಿಕೆ, ಹಿಂಸಾಚಾರ, ಭ್ರಷ್ಟಾಚಾರ, ಕಪ್ಪು ಹಣ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹೆಚ್ಚಿತ್ತು. ದೇಶದ ಸಂಪತ್ತು, ವಿಶ್ವಾಸಾರ್ಹತೆ, ಸಶಸ್ತ್ರ ಪಡೆಯ ನೈತಿಕತೆ, ಪ್ರಾಮಾಣಿಕತೆಗೆ ಗೌರವ ಕಡಿಮೆ ಆಗಿತ್ತು ಎಂದು ಪ್ರಧಾನಿ ಮೋದಿ ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago