Featured

ಕಾಂಗ್ರೇಸ್ ಗೂ ನನಗೂ ಮುಗಿದ ಅಧ್ಯಾಯ ; ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ ಸಿಎಂ ಇಬ್ರಾಹಿಂ – Vishwanews24

ಕಾಂಗ್ರೇಸ್ ಗೂ ನನಗೂ ಮುಗಿದ ಅಧ್ಯಾಯ ..

ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ ಸಿಎಂ ಇಬ್ರಾಹಿಂ..

ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟೆ ..

ಆದಷ್ಟು ಶೀಘ್ರ ಎಂಎಲ್‍ಸಿಗೆ ರಾಜೀನಾಮೆ ಕೊಡುತ್ತೇನೆ..

ನನ್ನ ಹಿತೈಷಿಗಳ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ..

ಬೆಂಗಳೂರು: ವಿಧಾನ ಪರಿಷತ್‍ನ ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ ಹಿನ್ನೆಲೆ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ನಿರ್ಧಾರ ನೋಡಿ ನನಗೆ ಸಂತೋಷ ಆಯಿತು. ಇದರಿಂದ ಶಿವಕುಮಾರ್ ಹಾಗೂ ಹರಿಪ್ರಸಾದ್ ಅವರಿಗೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಅವರಿಬ್ಬರ ವಿಚಾರಧಾರೆ ಒಂದೇ ಆಗಿರುವುದರಿಂದ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದು ವ್ಯಂಗ್ಯವಾಡಿದರು.

ಆದಷ್ಟು ಶೀಘ್ರವೇ ಎಂಎಲ್‍ಸಿಗೆ ರಾಜೀನಾಮೆ ಕೊಡುತ್ತೇನೆ. ಈ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ :

ಶಿವಕುಮಾರ್‌ಗೂ ನಮಗೂ ಯಾವತ್ತು ಹೊಂದಾಣಿಕೆ ಆಗಲ್ಲ. ಅವರ ವಿಚಾರಧಾರೆಗಳು ನಮಗೆ ಆಗಲ್ಲ. ನಮಗೆ ಸಿದ್ದರಾಮಯ್ಯ ಜೊತೆ ಹೊಂದಾಣಿಕೆ ಇತ್ತು. ಆದರೆ ಕಾಂಗ್ರೆಸ್‍ಗೂ ನನಗೂ ಮುಗಿದ ಅಧ್ಯಾಯವಾಗಿದೆ. ಸಿದ್ದರಾಮಯ್ಯ ಅವರಿಂದ ನಾನು ಕಾಂಗ್ರೆಸ್‍ಗೆ ಹೋಗಿದ್ದೆ. ಸೋನಿಯಾ ಗಾಂಧಿ ಅವರು ನನ್ನ ಭಾರ ಇಳಿಸಿದ್ದಾರೆ. ನನ್ನ ಹಿತೈಷಿಗಳ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.

ಸಿದ್ದರಾಮಯ್ಯಗಾಗಿ ಜೈಲಿಗೆ ಹೋಗಿ ಕಟ್ಟಿದ ಪಕ್ಷ ದಳ ಹಾಗೂ ದೇವೇಗೌಡರನ್ನು ಬಿಟ್ಟೆ. ನನ್ನ ನಿರ್ಣಯವನ್ನು ಶೀಘ್ರವಾಗಿ ನಿರ್ಧರಿಸುತ್ತೇನೆ. ಈ ಬಗ್ಗೆ ಕಾಂಗ್ರೆಸ್‍ಗೆ ಉತ್ತರ ಕೊಡಬೇಕು. ಸಿದ್ದರಾಮಯ್ಯ ಅವರನ್ನು ಬಾದಾಮಿಗೆ ಕರೆದೊಯ್ದಿದ್ದೆ. ಅವರಿಗೆ ರಾಜಕೀಯ ಜೀವನ ಕೊಡಲು ಅವರ ಕಾಲಿಗೆ ಬೀಳುತ್ತೇನೆ ಎಂದರು.

ಇದನ್ನೂ ಓದಿ :

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago