ಬೆಂಗಳೂರು: ಮೊದಲು ಕಾಂಗ್ರೆಸ್ ಪಕ್ಷದವರು ತಮ್ಮ ತಮ್ಮ ಮನೆಯನ್ನು ಸ್ವಚ್ಛಗೊಳಿಸಲಿ, ಮತ್ತೆ ಬೇರೆ ಪಕ್ಷದ ಬಗ್ಗೆ ಮಾತನಾಡಲಿ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬಿಜೆಪಿ ಬಗ್ಗೆ ಮಾತನಾಡುವ ಮೊದಲು ತಮ್ಮ ಪಕ್ಷದ ಬಗ್ಗೆ ತಿಳಿದುಕೊಳ್ಳಲಿ. ಮೊದಲು ಕಾಂಗ್ರೆಸ್ ಪಕ್ಷದವರು ತಮ್ಮ ಮನೆಯನ್ನು ತೊಳೆದುಕೊಳ್ಳಲಿ. ಆನಂತರ ಸಿದ್ದರಾಮಯ್ಯ ಬಿಜೆಪಿ ಬಗ್ಗೆ ಮಾತನಾಡಲಿ ಎಂದು ಸವಾಲು ಹಾಕಿದರು.
ಸರಕಾರ ರಚನೆಯಾಗಿ ಎರಡು ತಿಂಗಳಾಗಿದೆ. ನಾವು ಕಾಂಗ್ರೆಸ್’ನವರಿಗೆ ನಿಮ್ಮ ಶಾಸಕಾಂಗ ಪಕ್ಷದ ನಾಯಕನ ಹೆಸರು ಕೊಡಿ ಅಂತಾ ಕೇಳಿದ್ದೇವೆ. ಅವರಿಗೆ ಇನ್ನೂ ಹೆಸರು ಕೊಡಲು ಆಗಿಲ್ಲ. ಸಿದ್ದರಾಮಯ್ಯ ಅವರನ್ನು ನಾಯಕ ಎಂದು ಕಾಂಗ್ರೆಸ್ ಪಕ್ಷದಲ್ಲಿಯೇ ಅನೇಕರು ಒಪ್ಪುವುದಿಲ್ಲ ಎಂದು ಟೀಕಿಸಿದರು.
ಬೇರೆ ಪಕ್ಷದ ಬಗ್ಗೆ ಮಾತನಾಡುವ ಮೊದಲು ಡಿಕೆಶಿ, ಎಚ್.ಕೆ.ಪಾಟೀಲ್, ಪರಮೇಶ್ವರ ಬಾಯಿಂದ ನಮ್ಮ ನಾಯಕ ಸಿದ್ದರಾಮಯ್ಯ ಅಂತಾ ಹೇಳಿಸಲಿ ನೋಡೊಣ. ಸಿದ್ದರಾಮಯ್ಯ ಮೊದಲು ತಮ್ಮ ಮನೆ ಸರಿಮಾಡಿಕೊಳ್ಳೋದು ಕಲಿಯಲಿ ಅಂತ ಸವಾಲು ಹಾಕಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…