ಮಂಗಳೂರು: ತುಳುನಾಡಿನ ದೈವಗಳಾದ ಪಂಜುರ್ಲಿ, ಗುಳಿಗನ ಕಥೆಯಾಧಾರಿತ “ಕಾಂತಾರ’ ಸಿನೆಮಾ ದೇಶ-ವಿದೇಶದಲ್ಲಿ ಮೋಡಿ ಮಾಡುತ್ತಿರುವ ಮಧ್ಯೆಯೇ, ಕರಾವಳಿಯಾದ್ಯಂತ ತುಳು ರಂಗಭೂಮಿಯಲ್ಲಿ ಹೊಸ ಕ್ರಾಂತಿ ಬರೆದ “ಶಿವದೂತೆ ಗುಳಿಗೆ’ ತುಳು ನಾಟಕ ಇದೀಗ ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಪ್ರದರ್ಶನಕ್ಕೆ ಅಣಿಯಾಗಿದೆ..
“ಕಾಂತಾರ’ ಸಿನೆಮಾದಲ್ಲಿ 20 ನಿಮಿಷ ತುಳುನಾಡಿನ ಕಾರಣಿಕ ಶಕ್ತಿ ಗುಳಿಗನ ಪ್ರದರ್ಶನವಿದ್ದರೆ, ಶಿವದೂತೆ ಗುಳಿಗೆ ನಾಟಕವು ಪೂರ್ಣ ಗುಳಿಗನ ಕಥೆಯಾಧಾರಿತವಾಗಿದೆ. ವಿಶೇಷವೆಂದರೆ, ಕಾಂತಾರದಲ್ಲಿ “ಗುರುವ’ನಾಗಿ ಮಿಂಚಿರುವ ಕಿರುತೆರೆ ನಟ ಸ್ವರಾಜ್ ಶೆಟ್ಟಿ ಅವರೇ ಶಿವದೂತೆ ಗುಳಿಗ ನಾಟಕದಲ್ಲಿ “ಗುಳಿಗ’ನಾಗಿ ಅಭಿನಯಿಸುತ್ತಿದ್ದಾರೆ.
ಕಾಂತಾರ ಸಿನೆಮಾದಲ್ಲಿ ಗುಳಿಗನ ಅಬ್ಬರ ಕಂಡು ಕುತೂಹಲದಿಂದ ದೇಶ ಹಾಗೂ ರಾಜ್ಯದ ವಿವಿಧ ಭಾಗಗಳ ಜನರು ಗುಳಿಗ ದೈವದ ವಿಶೇಷತೆಯ ಬಗ್ಗೆ ತಿಳಿದುಕೊಳ್ಳುತ್ತಿದ್ದಾರೆ. ಕರಾವಳಿಯಲ್ಲಿ ಗುಳಿಗನ ಮಹಿಮೆಯನ್ನು ಸಾರುವ ನಾಟಕ ಪ್ರದರ್ಶನವಾಗುತ್ತಿರುವ ಹಿನ್ನೆಲೆಯಲ್ಲಿ, ಅದನ್ನು ಬೆಂಗಳೂರು, ಹುಬ್ಬಳ್ಳಿ, ಧಾರವಾಡ ಸಹಿತ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರದರ್ಶನ ಮಾಡಲು ಆಹ್ವಾನ ಬಂದಿದೆ. ಇದರಂತೆ ತುಳುವಿನಲ್ಲಿರುವ ಶಿವದೂತೆ ಗುಳಿಗೆ ಕನ್ನಡದಲ್ಲಿಯೂ ಪ್ರದರ್ಶನಕ್ಕೆ ರೆಡಿಯಾಗುತ್ತಿದೆ. ಡಬ್ಬಿಂಗ್ ಕಾರ್ಯ ಸದ್ಯ ಪ್ರಗತಿಯಲ್ಲಿದೆ.
ಬಂಟ್ವಾಳ: ಕೆಲಸವೊಂದರ ಇಂಟರ್‌ವ್ಯೂ ಇದೆ ಎಂದು ಹೇಳಿ ಮನೆಯಿಂದ ಹೋದ ಯುವತಿ ನಾಪತ್ತೆ – Vishwanews24
ಗುಳಿಗನ ಚರಿತ್ರೆಯ ಪಾಡªನ ತುಳು ಭಾಷೆಯಲ್ಲಿರಲಿದೆ. ಉಳಿದಂತೆ ಹಾಡು ಸಹಿತ ಎಲ್ಲ ಸಂಭಾಷಣೆ ಕನ್ನಡದಲ್ಲಿರಲಿದೆ.
ಹಿಂದಿಯಲ್ಲಿಯೂ ಕಾಂತಾರ ಬಗ್ಗೆ ಕುತೂಹಲ ವ್ಯಕ್ತವಾದ ಹಿನ್ನೆಲೆಯಲ್ಲಿ ಗುಳಿಗ ನಾಟಕವನ್ನು ಹಿಂದಿಯಲ್ಲೂ ಪ್ರದರ್ಶಿಸುವಂತೆ ಬೇಡಿಕೆ ಬಂದಿದೆ.
ಹೀಗಾಗಿ ಹಿಂದಿ ಅವತರಣಿಕೆಯಲ್ಲಿಯೂ ಗುಳಿಗನ ಕಥೆ ನಾಟಕದ ಸ್ವರೂಪದಲ್ಲಿ ಪ್ರದರ್ಶನಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಹಿಂದಿಯಲ್ಲಿ ಉತ್ತಮ ಫಲಿತಾಂಶ ದೊರೆತರೆ ಮಲಯಾಳ, ಗುಜರಾತಿ ಹಾಗೂ ಮರಾಠಿ ಭಾಷೆಯಲ್ಲಿಯೂ ಗುಳಿಗನ ನಾಟಕ ಪ್ರದರ್ಶನಕ್ಕೆ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್‌ಬೈಲು ಅವರು ಚಿಂತನೆ ನಡೆಸಿದ್ದಾರೆ.
ಬಿಹಾರ :ಸಾಲಗಾರರ ಕಿರಿ ಕಿರಿ.. ಕುಟುಂಬದ 6 ಮಂದಿ ವಿಷ ಸೇವಿಸಿ ಆತ್ಮಹತ್ಯೆ, ಓರ್ವಳ *ಸ್ಥಿತಿ ಗಂಭೀರ – Vishwanews24
2020ರ ಜ. 2ರಂದು ಮೊದಲ ಪ್ರದರ್ಶನ ಕಂಡ ತುಳುವಿನ “ಶಿವದೂತೆ ಗುಳಿಗೆ’ ಇದೀಗ 300ನೇ ಪ್ರದರ್ಶನವನ್ನು ದಾಟಿ ಮುನ್ನಡೆಯುತ್ತಿದೆ. ರಿಷಬ್ ಶೆಟ್ಟಿ ಅವರು ಕಾಂತಾರ ಸಿನೆಮಾ ಮಾಡುವ ಮುನ್ನ ಶಿವದೂತೆ ಗುಳಿಗ ನಾಟಕದ ಬಗ್ಗೆ ವಿವರವಾಗಿ ಅಭ್ಯಸಿಸಿ ಕೊಡಿಯಾಲ್‌ಬೈಲ್ ಅವರ ಜತೆಗೆ ಮಾತುಕತೆ ನಡೆಸಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…