ಕಾಂತಾರ ಚಿತ್ರಕ್ಕೆ ಮಹೂರ್ತ : ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ; ಇಂದು ಫಸ್ಟ್ ಲುಕ್ ರಿಲೀಸ್ – vishwanews24
‘ಕಾಂತಾರ’ ಚಿತ್ರಕ್ಕೆ ಮಹೂರ್ತ : ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ; ಇಂದು ಫಸ್ಟ್ ಲುಕ್ ರಿಲೀಸ್
ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ ಇಂದು ಮುಹೂರ್ತ ನಡೆಯುತ್ತಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆಯನ್ನ ಮಾಡಿಸಲಿದೆ. ಉದ್ಭವಮೂರ್ತಿ ವಿನಾಯಕ ದೇವರಿಗೆ ಮೂಡು ಗಣಪತಿ ಸೇವೆ, ತ್ರಿಕಾಲ ಸೇವೆ, ಅನ್ನದಾನ ನಡೆಯಲಿದೆ. ದೇಗುಲಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು ಬಣ್ಣ ಬಣ್ಣದ ಹೂವಿನಿಂದ ಸಿಂಗಾರ ಮಾಡಲಾಗಿದೆ.

ಇಂದು ಫಸ್ಟ್ ಲುಕ್ ರಿಲೀಸ್
ಕಾಂತಾರ ಸಿನಿಮಾ ಟೀಮ್ ನಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾದ ಮುಹೂರ್ತದ ದಿನದಂದೇ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ. ಫಸ್ಟ್ ಲುಕ್ ಗಾಗಿ ಮಾಡಿದ ಪೋಸ್ಟರ್ ನಲ್ಲಿ ಇದು ಬರಿ ಬೆಳಕಲ್ಲ, ದರ್ಶನ ಎಂದು ಟ್ಯಾಗ್ ಲೈನ್ ಕೊಡುವ ಮೂಲಕ ಕುತೂಹಲ ಮೂಡಿಸಿದ್ದಾರೆ ರಿಷಬ್ ಶೆಟ್ಟಿ.
ಮಣಿಪಾಲ: ಫ್ಲ್ಯಾಟ್‌ನಲ್ಲಿ ವೇಶ್ಯಾವಾಟಿಕೆ ದಂಧೆ – ಇಬ್ಬರು ಮಹಿಳೆಯರ ರಕ್ಷಣೆ ; ಮೂವರ ಬಂಧನ – vishwanews24
