Featured

ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯದ ನುಡಿ ನೀಡಿಲ್ಲ: ಆಡಳಿತ ಮಂಡಳಿ ಸ್ಪಷ್ಟನೆ – vishwanews24

ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯದ ನುಡಿ ನೀಡಿಲ್ಲ’:   ಆಡಳಿತ ಮಂಡಳಿ ಸ್ಪಷ್ಟನೆ

‘ಕಾಂತಾರ ಚಾಪ್ಟರ್ 1’ ಚಿತ್ರ ನೋಡಿ ಅನೇಕರು ದೈವವನ್ನು ಅನುಕರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ದೈವಕ್ಕೆ ಅಪಚಾರ ಆಗುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದವು. ಇತ್ತೀಚೆಗೆ ದೈವ ಹೇಳಿದ ಮಾತು ಕೂಡ ಚರ್ಚೆಗೆ ಕಾರಣ ಆಗಿತ್ತು. ‘ದೈವ ನುಡಿದಿದ್ದು ಕಾಂತಾರ ಚಿತ್ರದ ಬಗ್ಗೆಯೇ’ ಎಂದು ಅನೇಕರು ಹೇಳಿದ್ದರು. ಈ ಎಲ್ಲಾ ವಿಚಾರಗಳಿಗೆ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ‘ದೈವ ಕಾಂತಾರ ಸಿನಿಮಾ ಬಗ್ಗೆ ಏನನ್ನೂ ಹೇಳಿಲ್ಲ’ ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

‘ಕಾಂತಾರ ಚಾಪ್ಟರ್ 1’ ಸಿನಿಮಾ ರಿಲೀಸ್ ಆದ ಬಳಿಕ ಅನೇಕರು ದೈವದ ಅನುಕರಣೆ ಮಾಡುತ್ತಿದ್ದಾರೆ. ಥಿಯೇಟರ್ ಮುಂದೆ ಬಂದು ದೈವ ಬಂದಂತೆಲ್ಲ ನಡೆದುಕೊಂಡಿದ್ದಾರೆ. ದೈವದ ಅನುಕರಣೆ ಅನೇಕರಿಗೆ ಅಪಹಾಸ್ಯ ಮಾಡುತ್ತಿರುವ ರೀತಿ ಕಾಣಿಸಿದ್ದು, ದೈವಾರಾಧಕರು ವಿರೋಧ ಹೊರಹಾಕಿದ್ದರು. ಹೀಗಾಗಿ, ಕೆಲವರು ದೈವದ ಬಳಿ ಈ ಬಗ್ಗೆ ಪ್ರಶ್ನೆ ಕೇಳಿದ್ದರು.

ಪಿಲಿಚಂಡಿ ದೈವದ ನುಡಿ
ಪಿಲಿಚಂದಿ ಹೆಸರಿನ ದೈವ ಈ ಬಗ್ಗೆ ಭವಿಷ್ಯ ನುಡಿದಿತ್ತು. ‘ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನೋಡಿಕೊಳ್ಳುತ್ತೇನೆ. ಹಣವೆಲ್ಲ ಆಸ್ಪತ್ರೆ ಸೇರುವಂತೆ ಮಾಡುತ್ತೇನೆ. ನನ್ನನ್ನು ಅಪಚಾರ ಮಾಡುವವರಿಗೆ ಬುದ್ಧಿ ಕಲಿಸುತ್ತೇನೆ. ನೀವು ಹೋರಾಟವನ್ನು ಮುಂದುವರಿಸಿ. ನಾನು ನಿಮ್ಮ ಬೆನ್ನ ಹಿಂದೆ ಇದ್ದೇನೆ’ ಎಂದು ದೈವ ನುಡಿದಿತ್ತು.

ಆಡಳಿತ ಮಂಡಳಿ ಸ್ಪಷ್ಟನೆ..
ಮಂಗಳೂರು ತಾಲೂಕಿನ ಬಜಪೆ ಸಮೀಪದ ಪಡುಪೆರಾರ ಕ್ಷೇತ್ರದಲ್ಲಿರುವ ಬ್ರಹ್ಮ ದೇವರು ಬಲವಾಂಡಿ-ಪಿಲ್ಚಂಡಿ ದೈವಸ್ಥಾನದ ಆಡಳಿತ ಮಂಡಳಿ ದೈವದ ನುಡಿ ಕುರಿತು ಸ್ಪಷ್ಟನೆ ನೀಡಿದೆ. ‘ದೈವವು ನೀಡಿದ ಅಭಯ ನಡೆ ನುಡಿಗಳ ವಿಚಾರದಲ್ಲಿ ಗೊಂದಲ ಭಿನ್ನಾಭಿಪ್ರಾಯ ನಿರ್ಮಾಣವಾಗಿದೆ. ಕೆಲವು ಯುವಕರು ದೈವದ ಅಪಚಾರದ ಬಗ್ಗೆ ದೈವದ ಬಳಿ ನಿವೇದನೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ದೈವವು ಸೂಕ್ತ ಅಭಯ ನೀಡಿದೆ ಹೊರತು ಕಾಂತಾರ ಬಗ್ಗೆ ಯಾವುದೇ ನುಡಿಯನ್ನು ದೈವ ನೀಡಿರುವುದಿಲ್ಲ. ಯಾವುದೇ ಚಲನಚಿತ್ರದ ಬಗ್ಗೆಯೂ ದೈವ ಅಭಯ ನುಡಿ ನೀಡಿಲ್ಲ’ ಎಂದು ಸ್ಪಷ್ಟನೆ ಕೊಟ್ಟಿದೆ. ಈ ಮೂಲಕ ವಿವಾದಕ್ಕೆ ತೆರೆ ಬಿದ್ದಿದೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

9 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

13 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

13 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

13 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

14 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

14 hours ago