Featured

ಕಾಂತಾರ ನಂತರ ತುಳುನಾಡ ಆರಾಧ್ಯ ದೈವ ಕೊರಗಜ್ಜನ ಕಥೆ ಬೆಳ್ಳಿತೆರೆಗೆ – Vishwanews24

ಕಾಂತಾರ’ ನಂತರ ತುಳುನಾಡ ಆರಾಧ್ಯ ದೈವ ಕೊರಗಜ್ಜನ ಕಥೆ ಬೆಳ್ಳಿತೆರೆಗೆ..

ಬೆಳ್ತಂಗಡಿಯಲ್ಲಿ ಅದ್ದೂರಿಯಾಗಿ ನೆರವೇರಿತು ‘ಕರಿ ಹೈದ.. ಕರಿ ಅಜ್ಜ..ಸಿನೆಮಾದ ಮುಹೂರ್ತ ಸಮಾರಂಭ

ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ , ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ “ಕರಿ ಹೈದ….ಕರಿ ಅಜ್ಜ …”.ಸಿನೆಮಾದ ಮುಹೂರ್ತ ಸಮಾರಂಭವು ಅದ್ದೂರಿಯಾಗಿ ನೆರವೇರಿತು. ಬೆಳ್ತಂಗಡಿ ತಾಲೂಕಿನ ಬಳ್ಳಮಂಜದ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಸ್ಥಳಿಯ ಶಾಸಕ ಶ್ರೀ ಹರೀಶ್ ಪೂಂಜ ರವರು ಕ್ಯಾಮರ ಚಾಲನೆ ಮಾಡುವುದರ ಮೂಲಕ ಅದ್ದೂರಿ ಚಾಲನೆ ನೀಡಿದರು.

ಮಾತ್ರಶ್ರೀ ಕಮಲ ಕೆ ಸಪಲ್ಯ ಆರಂಭ ಫಲಕ ತೋರಿಸಿದರು. ಇತ್ತೀಚಿನ ಹಲವಾರು ವರ್ಷಗಳಿಂದ ಕೊರಗಜ್ಜನ ಮಹಿಮೆ ಮತ್ತು ಕಾರ್ಣಿಕವನ್ನು ತೆರೆಯ ಮೇಲೆ ತರಬೇಕೆಂಬ ಸಹವಾಸವನ್ನು ಹಲವಾರು ನಿರ್ಮಾಪಕರು ಯತ್ನಿಸುತ್ತಿದ್ದರು. ಇದೀಗ ಸುಧೀರ್ ಅತ್ತಾವರ್ ಕೊರಗಜ್ಜನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚಿಸಿ, ಸುಮಾರು 12ನೇ ಶತಮಾನದಲ್ಲಿದ್ದ ಕೊರಗಜ್ಜನ ನಿಜ ಬದುಕಿನ ಯಾರಿಗೂ ತಿಳಿದಿರದಂತಹ ಸಾಕಷ್ಟು ವಿಷಯಗಳನ್ನು ಈ ಸಿನಿಮಾದ ಮೂಲಕ ಜಗತ್ತಿಗೆ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಆಟೋದಲ್ಲಿ ಸ್ಟೋಟ ಪ್ರಕರಣ: ಶಂಕಿತ ಶಾರೀಕ್ ಗುರುತು ಪತ್ತೆ ಹಚ್ಚಿದ ಕುಟುಂಬಸ್ಥರು – Vishwanews24

ಇತ್ತೀಚೆಗೆ ಸುಧೀರ್ ನಿರ್ದೇಶನದ ಮರಾಠಿ -ಕನ್ನಡ ಸಿನಿಮಾ ಶೂಟಿಂಗ್ ಸಂಪೂರ್ಣ ಗೊಂಡು, ಅರೇಬಿಕ್- ಇಂಗ್ಲಿಷ್ ಸಿನೆಮ ಸಿನಿಮಾ “ಗುಲೇ ಬಕಾವಲಿ” ಮತ್ತು ಮರಾಠಿ-ಕನ್ನಡ ಸಿನಿಮಾ “ಅಗೋಳಿ ಮಂಜಣ್ಣ” ಫ್ಲೋರ್ ನಲ್ಲಿ ಇರುವ ಮಧ್ಯೆಯೇ ಇದೀಗ ಸುಧೀರ್ ಮತ್ತೊಂದು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ನಡೆಸುವ ಮೊದಲು ಕೊರಗಜ್ಜನ ಸಮುದಾಯದ ಪ್ರಮುಖ ವ್ಯಕ್ತಿಗಳು ಡೊಳ್ಳು -ತಮಟೆಗಳ ಸ ವಿಶೇಷ ಪೂಜೆಯನ್ನು ಶ್ರೀ ಸುಂದರ ಬೆಳುವಾಯಿ, ಶ್ರೀ ಬಾಬು ಪಾಂಗಳ, ಶ್ರೀ ಬಲ್ ರಾಜ್, ಶ್ರೀ ರಮೇಶ್ ಮೊದಲಾದ ಮಹನೀಯರು ಮತ್ತು ಗುರಿಕಾರರು ಹಳೆಯ ಶೈಲಿಯ ಪೂಜಾ ಕಾರ್ಯಕ್ರಮವನ್ನು ನಡೆಸಿಕೊಟ್ಟು ಸಿನೆಮಾಕ್ಕೆ ಶುಭ ಹಾರೈಸಿದರು. ಇದನ್ನೂ ಓದಿ: ✴️ ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ (ರಿ.) ಆದಿ ಉಡುಪಿ ಸಂಸ್ಥೆಯ ವೆಬ್ಸೈಟ್ ಅನಾವರಣ ಹಾಗೂ ದೇಯಿ ಬೈದೆದಿ ಚಲನ ಚಿತ್ರ ಪ್ರದರ್ಶನ ಕಾರ್ಯಕ್ರಮ – Vishwanews24

ಖ್ಯಾತ ಹಾಲಿವೂಡ್-ಬಾಲಿವೂಡ್ ನಟ ಕಬೀರ್ ಬೇಡಿ ಯವರು ವಿಶೇಷ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದಲ್ಲಿ ಖ್ಯಾತ ನಾಟಿಯರಾದ ಭವ್ಯ ಮತ್ತು ಶ್ರುತಿ ಕೂಡಾ ಅಭಿನಯಿಸುತ್ತಿದ್ದಾರೆ. ಭರತ್ ಸೂರ್ಯ ಎನ್ನುವ ಹೊಸ ಕಲಾವಿದನನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತಿದ್ದಾರೆ. ವಿದ್ಯಾಧರ್ ಶೆಟ್ಟಿ ಸಂಕಲನದ ಜೊತೆಗೆ ಎಂಟುನೂರು ವರ್ಷಗಳ ಇತಿಹಾಸದ ದಾಖಲೆ ಮತ್ತು ಪುರಾವೆಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

24 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

41 minutes ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

50 minutes ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

1 hour ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

1 hour ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

2 hours ago