ಕಾಂತಾರ ಪ್ರಭಾವ : ರಿಯಲ್ ಕಾಂತಾರ ದೈವನರ್ತಕ ಗುಡ್ಡ ಪಾಣಾರಗೆ ಇಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ – Vishwanews24
ಕಾಂತಾರ ಪ್ರಭಾವ : ರಿಯಲ್ ಕಾಂತಾರ ದೈವನರ್ತಕ ಗುಡ್ಡಪಾಣಾರಗೆ ಇಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಸಿನಿಮಾ ಕೇವಲ ನಿರ್ದೇಶಕರಿಗೆ ಮತ್ತು ನಿರ್ಮಾಪಕರಿಗೆ ಮಾತ್ರವಲ್ಲ, ದೈವನರ್ತಕರ ಬಾಳಲ್ಲೂ ನಗೆ ಮೂಡಿಸಿದೆ. ಈ ಸಿನಿಮಾದ ನೋಡಿದ ನಂತರ ದೈವ ನರ್ತಕರಿಗೆ ಹಲವು ಸೌಲಭ್ಯಗಳು ಒಲಿದು ಬಂದಿವೆ.
ಇತ್ತೀಚೆಗಷ್ಟೇ ಕರ್ನಾಟಕ ಸರಕಾರವು ದೈವನರ್ತಕರಿಗೆ ಮಾಸಾಶನವನ್ನು ಘೋಷಣೆ ಮಾಡಿದ್ದರು. ಸರಕಾರದ ಈ ನಡೆ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು, ಇದೀಗ ಮೊದಲ ಬಾರಿಗೆ ದೈವನರ್ತಕರಿಗೂ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದಾರೆ. ಈ ಬಾರಿ ದೈವನರ್ತಕ ಗುಡ್ಡಪಾಣಾರಗೆ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಉಡುಪಿ ಜಿಲ್ಲೆಯ ಕಾಪುವಿನ ಗುಡ್ಡ ಪಾಣಾರು ಇಂಥದ್ದೊಂದು ಗೌರವಕ್ಕೆ ಪಾತ್ರರಾಗಿದ್ದಾರೆ. ಇದನ್ನೂ ಓದಿ : ರಾಜ್ಯದ ರೈತ ಕುಟುಂಬಗಳಿಗೆ ಗುಡ್ ನ್ಯೂಸ್ ; ಇಂದಿನಿಂದ `ಯಶಸ್ವಿನಿ ಆರೋಗ್ಯ ವಿಮೆ’ ನೋಂದಣಿ ಆರಂಭ – Vishwanews24

ಉಡುಪಿಜಿಲ್ಲೆಯ ಕಾಪು ಹಳೆ ಮಾರಿಗುಡಿಯಲ್ಲಿ ಎರಡು ವರ್ಷಕೊಮ್ಮೆ ನಡೆಯುವ ಪಿಲಿಕೋಲದಲ್ಲಿ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಿರುವ ಗುಡ್ಡ ಪಾಣರಿಗೆ ಜಾನಪದ ವಿಭಾಗದಲ್ಲಿ ಈ ಬಾರಿ ಪ್ರಶಸ್ತಿ ಘೋಷಣೆ ಆಗಿದ್ದು, ಇಂದು ಬೆಂಗಳೂರಿನಲ್ಲಿ ಅವರು ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ. 68ರ ವಯಸ್ಸಿನ ಗುಡ್ಡ ಪಾಣಾರು 25ನೇ ವಯಸ್ಸಿನಿಂದಲೇ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ.

ಅಷ್ಟೇ ಅಲ್ಲದೇ, ಕಾಂತಾರ ಸಿನಿಮಾದಲ್ಲಿ ನಟಿಸಿದ್ದ ದೈವಾರಾಧಕ ನಾಗರಾಜ ಪಾಣ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಆಗಿದೆ. ಯಾವುದೇ ಅರ್ಜಿ ಹಾಕದೇ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ ಎನ್ನುವುದು ಮತ್ತೊಂದು ವಿಶೇಷ. ಕಾಂತಾರ ಸಿನಿಮಾದಿಂದಾಗಿ ದೈವ ನರ್ತಕರು ಕೂಡ ಇದೀಗ ಮುನ್ನೆಲೆಗೆ ಬಂದಿದ್ದಾರೆ. ಇದನ್ನೂ ಓದಿ : ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುತ್ತಲೇ ಇತರ ಭಾಷೆಯನ್ನು ಉಳಿಸೋಣ : ಸುನೀಲ್ ಕುಮಾರ್ – Vishwanews24
