Featured

ಕಾಂತಾರ’ ವಿವಾದಾತ್ಮಕ ಹೇಳಿಕೆ : ಚೇತನ್ ವಿರುದ್ಧದ ಎಫ್.ಐ.ಆರ್ ರದ್ದತಿಗೆ ನಿರಾಕರಿಸಿದ ಹೈಕೋರ್ಟ್  – Vishwanews24

ಕಾಂತಾರ’ ವಿವಾದಾತ್ಮಕ ಹೇಳಿಕೆ: ಚೇತನ್ ವಿರುದ್ಧದ ಎಫ್.ಐ.ಆರ್ ರದ್ದತಿಗೆ ನಿರಾಕರಿಸಿದ ಹೈಕೋರ್ಟ್

ಕರಾವಳಿ ದೈವಗಳ ಕುರಿತಾದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ, ಪ್ರಪಂಚದಾದ್ಯಂತ ತೆರೆಕಂಡ ಸಂದರ್ಭದಲ್ಲಿ ನಟ ಚೇತನ್, ಭೂತಕೋಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು.

ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ, ತಮ್ಮ ಮಾತುಗಳನ್ನು ಸಮರ್ಥಿಸಿಕೊಂಡೇ ಬಂದಿದ್ದರು ಚೇತನ್. ಆನಂತರ ತಮ್ಮ ಮೇಲಿನ ಎಫ್.ಐ.ಆರ್ ಅನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ ಮೋರೆ ಹೋಗಿದ್ದರು. ಇದೀಗ ಎಫ್.ಐ.ಆರ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ. ಈ ಅರ್ಜಿ ವಿಚಾರಣೆಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಪೀಠ, ಪ್ರಕರಣವಿನ್ನೂ ತನಿಖಾ ಹಂತದಲ್ಲಿ ಇರುವುದರಿಂದ ಈ ಹಂತದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಬಾರದು ಎಂದು ಅರ್ಜಿ ವಜಾಗೊಳಿಸಿದೆ. ಇದನ್ನೂ ಓದಿ: ಕಿಡ್ನ್ಯಾಪ್‌ ಮಾಡಿ , ಬಲವಂತವಾಗಿ ಆಲ್ಕೋಹಾಲ್‌ ಕುಡಿಸಿ ನಾಲ್ವರು ಮಹಿಳೆಯರಿಂದ ಯುವಕನ ಅತ್ಯಾಚಾರ – Vishwanews24

ಚೇತನ್ ಪರ ವಕೀಲರು ‘ಅರ್ಜಿದಾರರ ಮಾತಿನಿಂದ ಸಮಾಜದಲ್ಲಿ ಅಶಾಂತಿ ಮೂಡಿಲ್ಲ. ಯಾರಿಗೂ ತೊಂದರೆ ಕೊಡುವ ಉದ್ದೇಶವೂ ಅವರದ್ದಲ್ಲ. ತೊಂದರೆಯೂ ಆಗಿಲ್ಲ. ಹಾಗಾಗಿ ಎಫ್.ಐ.ಆರ್ ರದ್ದು ಮಾಡಬೇಕು ಎಂದು ಮನವಿ ಮಾಡಿಕೊಂಡರು. ಇದಕ್ಕೆ ಸರಕಾರದ ಪರ ವಕೀಲರು ಆಕ್ಷೇಪಿಸಿದರು. ಉದ್ದೇಶಪೂರ್ವಕವಾಗಿಯೇ ಇಂತಹ ಹೇಳಿಕೆ ನೀಡಿದ್ದಾರೆ ಎಂದು ವಾದಿಸಿದರು. ಪ್ರಕರಣ ತನಿಖೆಯ ಹಂತದಲ್ಲಿ ಇರುವುದರಿಂದ ಎಫ್.ಐ.ಆರ್ ರದ್ದು ಮಾಡಬಾರದು ಎಂದು ಮನವಿ ಮಾಡಿದರು. ಇವರ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿತು.

ಭೂತಕೋಲದ ಬಗ್ಗೆ ಚೇತನ್ ಆಡಿದ ಮಾತುಗಳು ಅಂದು ಸಾಕಷ್ಟು ಟೀಕೆಗೆ ಗುರಿಯಾಗಿದ್ದವು. ಕರಾವಳಿಯ ದೈವಗಳ ಬಗ್ಗೆ ಚೇತನ್ ತಿಳಿದುಕೊಂಡು ಮಾತನಾಡಬೇಕು ಎಂದು ಹಲವರು ಸಲಹೆ ನೀಡಿದರು. ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದರು. ನಂತರ ದೂರು ದಾಖಲಾಗಿತ್ತು. ದೂರು ಇದೀಗ ತನಿಖಾ ಹಂತದಲ್ಲಿದ್ದು, ಚೇತನ್ ತನಿಖೆಯನ್ನು ಎದುರಿಸಬೇಕಿದೆ. ಇದನ್ನೂ ಓದಿ: ಮೈಸೂರು: ಕಾಡಾನೆ ದಾಳಿ.. ದಸರಾ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಆನೆ ದುರಂತ ಅಂತ್ಯ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago