ಕರಾವಳಿ ದೈವಗಳ ಕುರಿತಾದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ, ಪ್ರಪಂಚದಾದ್ಯಂತ ತೆರೆಕಂಡ ಸಂದರ್ಭದಲ್ಲಿ ನಟ ಚೇತನ್, ಭೂತಕೋಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು.
ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ, ತಮ್ಮ ಮಾತುಗಳನ್ನು ಸಮರ್ಥಿಸಿಕೊಂಡೇ ಬಂದಿದ್ದರು ಚೇತನ್. ಆನಂತರ ತಮ್ಮ ಮೇಲಿನ ಎಫ್.ಐ.ಆರ್ ಅನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ ಮೋರೆ ಹೋಗಿದ್ದರು. ಇದೀಗ ಎಫ್.ಐ.ಆರ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ. ಈ ಅರ್ಜಿ ವಿಚಾರಣೆಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಪೀಠ, ಪ್ರಕರಣವಿನ್ನೂ ತನಿಖಾ ಹಂತದಲ್ಲಿ ಇರುವುದರಿಂದ ಈ ಹಂತದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಬಾರದು ಎಂದು ಅರ್ಜಿ ವಜಾಗೊಳಿಸಿದೆ. ಇದನ್ನೂ ಓದಿ: ಕಿಡ್ನ್ಯಾಪ್ ಮಾಡಿ , ಬಲವಂತವಾಗಿ ಆಲ್ಕೋಹಾಲ್ ಕುಡಿಸಿ ನಾಲ್ವರು ಮಹಿಳೆಯರಿಂದ ಯುವಕನ ಅತ್ಯಾಚಾರ – Vishwanews24
ಚೇತನ್ ಪರ ವಕೀಲರು ‘ಅರ್ಜಿದಾರರ ಮಾತಿನಿಂದ ಸಮಾಜದಲ್ಲಿ ಅಶಾಂತಿ ಮೂಡಿಲ್ಲ. ಯಾರಿಗೂ ತೊಂದರೆ ಕೊಡುವ ಉದ್ದೇಶವೂ ಅವರದ್ದಲ್ಲ. ತೊಂದರೆಯೂ ಆಗಿಲ್ಲ. ಹಾಗಾಗಿ ಎಫ್.ಐ.ಆರ್ ರದ್ದು ಮಾಡಬೇಕು ಎಂದು ಮನವಿ ಮಾಡಿಕೊಂಡರು. ಇದಕ್ಕೆ ಸರಕಾರದ ಪರ ವಕೀಲರು ಆಕ್ಷೇಪಿಸಿದರು. ಉದ್ದೇಶಪೂರ್ವಕವಾಗಿಯೇ ಇಂತಹ ಹೇಳಿಕೆ ನೀಡಿದ್ದಾರೆ ಎಂದು ವಾದಿಸಿದರು. ಪ್ರಕರಣ ತನಿಖೆಯ ಹಂತದಲ್ಲಿ ಇರುವುದರಿಂದ ಎಫ್.ಐ.ಆರ್ ರದ್ದು ಮಾಡಬಾರದು ಎಂದು ಮನವಿ ಮಾಡಿದರು. ಇವರ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿತು.
ಭೂತಕೋಲದ ಬಗ್ಗೆ ಚೇತನ್ ಆಡಿದ ಮಾತುಗಳು ಅಂದು ಸಾಕಷ್ಟು ಟೀಕೆಗೆ ಗುರಿಯಾಗಿದ್ದವು. ಕರಾವಳಿಯ ದೈವಗಳ ಬಗ್ಗೆ ಚೇತನ್ ತಿಳಿದುಕೊಂಡು ಮಾತನಾಡಬೇಕು ಎಂದು ಹಲವರು ಸಲಹೆ ನೀಡಿದರು. ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದರು. ನಂತರ ದೂರು ದಾಖಲಾಗಿತ್ತು. ದೂರು ಇದೀಗ ತನಿಖಾ ಹಂತದಲ್ಲಿದ್ದು, ಚೇತನ್ ತನಿಖೆಯನ್ನು ಎದುರಿಸಬೇಕಿದೆ. ಇದನ್ನೂ ಓದಿ: ಮೈಸೂರು: ಕಾಡಾನೆ ದಾಳಿ.. ದಸರಾ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಆನೆ ದುರಂತ ಅಂತ್ಯ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…