Featured

ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ : ರಾಕೇಶ್ ನಿಧನಕ್ಕೆ ರಿಷಬ್ ಶೆಟ್ಟಿ ಸಂತಾಪ – vishwanews24

ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಅದ್ಭುತ ಕಲಾವಿದ : ರಾಕೇಶ್‌ ನಿಧನಕ್ಕೆ ರಿಷಬ್‌ ಸಂತಾಪ

ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ನಿಧನ ಚಿತ್ರರಂಗಕ್ಕೆ ಶಾಕ್ ನೀಡಿದೆ. ಇದೀಗ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ‘ಕಾಂತಾರ ಚಾಪ್ಟರ್ 1’ರಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ತುಂಬಲಾರದ ನಷ್ಟ ಎಂದು ಬರೆದುಕೊಂಡಿದ್ದಾರೆ.

Rakesh Poojariನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ‘ಕಾಂತಾರ’  ಸಿನಿಮಾದಲ್ಲಿ ನಿನ್ನ ಪಾತ್ರ ಹಾಗೂ ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ. ಮತ್ತೆ ಹುಟ್ಟಿ ಬಾ ಗೆಳೆಯ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ ಶಕ್ತಿ ನಿನ್ನ ಕುಟುಂಬಕ್ಕೆ ಕೊಡಲಿ ಎಂದು ರಾಕೇಶ್‌ ಬಗ್ಗೆ ರಿಷಬ್ ಶೆಟ್ಟಿ ಪೋಸ್ಟ್ ಹಂಚಿಕೊಂಡಿದ್ದಾರೆ.

ನಟ ರಾಕೇಶ್ ಪೂಜಾರಿ  ನಿಧನಕ್ಕೆ ತೀವ್ರ ಸಂತಾಪಗಳು. ಈ ನೋವನ್ನು ಭರಿಸುವ ಶಕ್ತಿ ಕುಟುಂಬಸ್ಥರಿಗೆ, ಅವರ ಆಪ್ತರಿಗೆ ಹಾಗೂ ಹಿತೈಷಿಗಳಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ. ಈ ದುಃಖದ ಘಳಿಗೆಯಲ್ಲಿ ನಾವೆಲ್ಲರೂ ಅವರ ಕುಟುಂಬದೊಂದಿಗೆ ಇದ್ದೇವೆ ಎಂದು ಕಾಂತಾರ ಸಿನಿಮಾ ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲ್ಮ್ಸ್‌ ರಾಕೇಶ್ ಅಗಲಿಕೆಗೆ ಸಂತಾಪ ಸೂಚಿಸಿದೆ.

ಮೇ 12ರಂದು ರಾಕೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ವೇಳೆ, ಅನುಶ್ರೀ, ರಕ್ಷಿತಾ ಪ್ರೇಮ್, ಯೋಗರಾಜ್ ಭಟ್, ಕಾಮಿಡಿ ಕಿಲಾಡಿಗಳು ತಂಡದ ಕಲಾವಿದರು ಭಾಗಿಯಾಗಿ ಅಂತಿಮ ದರ್ಶನ ಪಡೆದರು. ನಿನ್ನೆ ಸಂಜೆ ಉಡುಪಿ ಹೂಡೆಯ ರುದ್ರಭೂಮಿಯಲ್ಲಿ ಬಿಲ್ಲವ ಸಂಪ್ರದಾಯದಂತೆ ನಟನ ಅಂತ್ಯಕ್ರಿಯೆ ನಡೆಯಿತು.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

9 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

18 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

18 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

18 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

18 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago