ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ನಿಧನ ಚಿತ್ರರಂಗಕ್ಕೆ ಶಾಕ್ ನೀಡಿದೆ. ಇದೀಗ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ‘ಕಾಂತಾರ ಚಾಪ್ಟರ್ 1’ರಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ತುಂಬಲಾರದ ನಷ್ಟ ಎಂದು ಬರೆದುಕೊಂಡಿದ್ದಾರೆ.
Rakesh Poojariನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ‘ಕಾಂತಾರ’ ಸಿನಿಮಾದಲ್ಲಿ ನಿನ್ನ ಪಾತ್ರ ಹಾಗೂ ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ. ಮತ್ತೆ ಹುಟ್ಟಿ ಬಾ ಗೆಳೆಯ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ ಶಕ್ತಿ ನಿನ್ನ ಕುಟುಂಬಕ್ಕೆ ಕೊಡಲಿ ಎಂದು ರಾಕೇಶ್ ಬಗ್ಗೆ ರಿಷಬ್ ಶೆಟ್ಟಿ ಪೋಸ್ಟ್ ಹಂಚಿಕೊಂಡಿದ್ದಾರೆ.
ನಟ ರಾಕೇಶ್ ಪೂಜಾರಿ ನಿಧನಕ್ಕೆ ತೀವ್ರ ಸಂತಾಪಗಳು. ಈ ನೋವನ್ನು ಭರಿಸುವ ಶಕ್ತಿ ಕುಟುಂಬಸ್ಥರಿಗೆ, ಅವರ ಆಪ್ತರಿಗೆ ಹಾಗೂ ಹಿತೈಷಿಗಳಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ. ಈ ದುಃಖದ ಘಳಿಗೆಯಲ್ಲಿ ನಾವೆಲ್ಲರೂ ಅವರ ಕುಟುಂಬದೊಂದಿಗೆ ಇದ್ದೇವೆ ಎಂದು ಕಾಂತಾರ ಸಿನಿಮಾ ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲ್ಮ್ಸ್ ರಾಕೇಶ್ ಅಗಲಿಕೆಗೆ ಸಂತಾಪ ಸೂಚಿಸಿದೆ.
ಮೇ 12ರಂದು ರಾಕೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ವೇಳೆ, ಅನುಶ್ರೀ, ರಕ್ಷಿತಾ ಪ್ರೇಮ್, ಯೋಗರಾಜ್ ಭಟ್, ಕಾಮಿಡಿ ಕಿಲಾಡಿಗಳು ತಂಡದ ಕಲಾವಿದರು ಭಾಗಿಯಾಗಿ ಅಂತಿಮ ದರ್ಶನ ಪಡೆದರು. ನಿನ್ನೆ ಸಂಜೆ ಉಡುಪಿ ಹೂಡೆಯ ರುದ್ರಭೂಮಿಯಲ್ಲಿ ಬಿಲ್ಲವ ಸಂಪ್ರದಾಯದಂತೆ ನಟನ ಅಂತ್ಯಕ್ರಿಯೆ ನಡೆಯಿತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…