Featured

ಕಾಂತಾರ 2 ಮಾಡುವ ಮೊದಲು ವೀರೇಂದ್ರ ಹೆಗ್ಗಡೆಯವರ ಅನುಮತಿ ಕೇಳಲು ದೈವ ಅಪ್ಪಣೆ ‌ಕೊಟ್ಟಿದೆ: ದೈವ ನರ್ತಕ ಉಮೇಶ್ ಪಂಬದ – Vishwanews24

ಕಾಂತಾರ 2 ಮಾಡುವ ಮೊದಲು ವೀರೇಂದ್ರ ಹೆಗ್ಗಡೆಯವರ ಅನುಮತಿ ಕೇಳಲು ದೈವ ಅಪ್ಪಣೆ ‌ಕೊಟ್ಟಿದೆ: ದೈವ ನರ್ತಕ ಉಮೇಶ್ ಪಂಬದ

ಕಾಂತಾರ 2 ಸಿನಿಮಾ ಮಾಡಲು ವೀರೇಂದ್ರ ಹೆಗ್ಗಡೆಯವರ ಅನುಮತಿ ಕೇಳುವಂತೆ ದೈವ ನುಡಿದಿರುವುದಾಗಿ ದೈವ ನರ್ತಕ ಉಮೇಶ್ ಪಂಬದ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ‘ತಿಂಗಳ ಮೊದಲು ರಿಷಬ್ ಶೆಟ್ಟಿ ಹರಕೆ ನೇಮ ಕೊಡುವುದಾಗಿ ಹೇಳಿ ವೀಳ್ಯ ಕೊಟ್ಟಿದ್ದರು. ಮೊನ್ನೆ ರಿಷಬ್ ಮತ್ತು ಅವರ ತಂಡ ಬಂದು ದೈವದ ಹರಕೆ ಕೊಟ್ಟರು. ಚೆಂದದಿಂದ ದೈವ ಹರಕೆ ಸ್ವೀಕರಿಸಿ ಅವರಿಗೆ ಅಭಯ ಕೊಟ್ಟಿದೆ. ನಮಗೆ ಅವರ ಪರಿಚಯ ಇರಲಿಲ್ಲ, ನಡೆಸಿಕೊಟ್ಟವರು ಮಡಿವಾಳ ಕುಟುಂಬದವರು. ದೈವದ ನಡೆಯಲ್ಲಿ ಆದ ವಿಷಯ ನನಗೆ ಗೊತ್ತಿರಲ್ಲ, ಅದು ದೈವಕ್ಕೆ ‌ಮಾತ್ರ ಗೊತ್ತಿರುತ್ತೆ. ದೈವದ ನೇಮೋತ್ಸವ ಆದ ನಂತರ ನನಗೆ ಭಕ್ತರು ಬಂದು ಈ ಬಗ್ಗೆ ಹೇಳಿದರು’ ಎಂದರು.

ಕಾಂತಾರ 2 ಸಿನಿಮಾ ಅನುಮತಿ ಬಗ್ಗೆ ಮಾತನಾಡಿದ ಉಮೇಶ್, ‘ಕಾಂತಾರ 2 ಸಿನಿಮಾ ‌ಮಾಡಲು ದೈವ ಅನುಮತಿ ಕೊಟ್ಟಿದೆ ಅಂತ ನನಗೆ ಭಕ್ತರು ಹೇಳಿದರು. ರಿಷಬ್ ಶೆಟ್ಟಿ ಎರಡನೇ ಭಾಗದ ಬಗ್ಗೆ ದೈವದ ಬಳಿ ಕೇಳಿದರು. ಆದರೆ ಅದಕ್ಕೆ ಮೊದಲು ಧರ್ಮಸ್ಥಳ ಮಂಜುನಾಥೇಶ್ವರನ ಅನುಮತಿ ಕೇಳಲು ದೈವ ಹೇಳಿದೆಯಂತೆ. ಬಹಳ ಆಲೋಚನೆಯಲ್ಲಿ ಮುಂದಿನ ಸಿನಿಮಾ ಮಾಡಿ ಅಂತ ದೈವ ಹೇಳಿದೆಯಂತೆ. ಮೊದಲ ಚಿತ್ರದಲ್ಲಿ ಒಳ್ಳೆಯದು ಆಗಿದೆ, ಅಪವಾದವೂ ಬಂದಿದೆ. ಹತ್ತು ಹೆಜ್ಜೆ ಇಟ್ಟು ಆ ಸಿನಿಮಾ ‌ಮಾಡಿದ್ದೀರಿ, ಇದಕ್ಕೆ ನೂರು ಹೆಜ್ಜೆ ಇಡಿ ಅಂತ ದೈವ ಹೇಳಿದೆ. ಧರ್ಮ ಪ್ರಕಾರ, ಆಚಾರ ವಿಚಾರದಲ್ಲಿ ಹೋಗಲು ದೈವ ಹೇಳಿದೆ’ ಎಂದಿದ್ದಾರೆ.

ರಿಷಬ್ ಶೆಟ್ಟಿ ಅವರು ಧರ್ಮಸ್ಥಳಕ್ಕೆ ಹೋಗ್ತಾ ಇರ್ತಾರೆ, ಮೊನ್ನೆ ದೈವವೂ ಧರ್ಮಸ್ಥಳಕ್ಕೆ ಹೋಗಲು ಅಪ್ಪಣೆ ಆಗಿದೆ. ಕಾಂತಾರ 2 ಮಾಡುವ ಮುನ್ನ ಖಾವಂದರ(ಹೆಗ್ಗಡೆ) ಬಳಿ ಅನುಮತಿ ಕೇಳಲು ದೈವ ಅಪ್ಪಣೆ ‌ಕೊಟ್ಟಿದೆಯಂತೆ. ರಿಷಬ್ ಬಹಳ ಒಳ್ಳೆಯವರು, ಬಹಳ ಸಂತೋಷದಿಂದ ಎಲ್ಲರಲ್ಲೂ ಇದ್ದರು. ನೇಮೋತ್ಸವದ ವೇಳೆಯೂ ಬಹಳ ಶುದ್ದಾಚಾರದಿಂದ ಅವರು ನಡೆಸಿಕೊಟ್ಟಿದ್ದಾರೆ. ನಾನು ನೋಡಿದ ಮಟ್ಟಿಗೆ ಅವರ ಸೇವೆ ನಮಗೆ ಸಂತೋಷ ಆಗಿದೆ, ಉಳಿದಿದ್ದು ದೈವಕ್ಕೆ ಬಿಟ್ಟಿದ್ದು. ದೈವದ ವಿಷಯದಲ್ಲಿ ಕೆಟ್ಟದ್ದು ಮಾಡಬಾರದು, ತಿಳಿದು ಮಾಡಲೇ ಬಾರದು. ಕಾಂತಾರ ಭಾಗ 2 ಮಾಡಲು ಅವರು ಮತ್ತಷ್ಟು ಶುದ್ದಾಚಾರ ಪಾಲಿಸಬೇಕು. ಮೊದಲ ಚಿತ್ರದಲ್ಲಿ ಬಹಳ ಶುದ್ದಾಚಾರ ಪಾಲಿಸಿ ಭಕ್ತಿಯಿಂದ ‌ಮಾಡಿದ್ದಾರೆ. ಹಾಗಾಗಿ ಎರಡನೇ ಭಾಗವನ್ನೂ ಅವರು ಅಷ್ಟೇ ಶುದ್ದಾಚಾರದಿಂದ ಮಾಡ್ತಾರೆ ಅನ್ನೋ ನಂಬಿಕೆ ಇದೆ’ ಎಂದಿದ್ದಾರೆ ಉಮೇಶ್ ಪಂಬದ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

10 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

10 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

10 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

11 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

11 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

11 hours ago