ಉಪ್ಪಿನಂಗಡಿ,: ಸುಮಾರು 500 ವರ್ಷಗಳ ಇತಿಹಾಸ ಹೊಂದಿರುವ ದೈವಸ್ಥಾನದ ಅವಶೇಷ ಹಾಗೂ ಮೂರ್ತಿ ಪತ್ತೆ ಇರುವ ಪ್ರಸಿದ್ಧ ದೈವಸ್ಥಾನವೊಂದು ಕಾಡಿನೊಳಗೆ ಬೆಳಿಕಿಗೆ ಬಂದ ಘಟನೆ ಪೆರ್ನೆ ಗ್ರಾಮದ ಕೊರತ್ತಿಕಟ್ಟೆ ಮಾಡತ್ತಾರು ಎಂಬಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಮಾಡತ್ತಾರುವಿನಲ್ಲಿ ನಡೆದ ಉತ್ಖನನದ ವೇಳೆ ಹಲವು ಮೂರ್ತಿಗಳು ಸಿಕ್ಕಿವೆ. ಮಾಡತ್ತಾರು ಆಸುಪಾಸಿನ ಊರುಗಳಲ್ಲಿ ಇತ್ತೀಚಿಗೆ ಅನಾರೋಗ್ಯ ಹಾಗೂ ಅಕಾಲಿಕ ಸಾವುಗಳು ಸಂಭವಿಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿತ್ತು. ಇದೇ ವೇಳೆ, 13ರಷ್ಟು ನಾಗರ ಹಾವುಗಳು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಈ ಎಲ್ಲಾ ಘಟನೆಗಳಿಂದ ಕಳವಳಗೊಂಡ ಗ್ರಾಮಸ್ಥರು ಒಟ್ಟು ಸೇರಿ ಅಷ್ಟಮಂಗಳ ಪ್ರಶ್ನೆಯ ಮೊರೆ ಹೋದರು. ಅಷ್ಠಮಂಗಳ ಪ್ರಶ್ನೆ ಇರಿಸಿದ ಖ್ಯಾತ ಜ್ಯೋತಿಷಿ ಕೆ.ವಿ. ಗಣೇಶ್ ಭಟ್ ಮುಳಿ, 500 ವರ್ಷಗಳ ಇತಿಹಾಸ ಹೊಂದಿರುವ ದೈವಸ್ಥಾನವೊಂದು ಕಾಡಿನೊಳಗೆ ಪಾಳು ಬಿದ್ದಿದೆ. ಈ ಪ್ರದೇಶದಲ್ಲಿದ್ದ ಭಂಡಾರದ ಮನೆಯೂ ನೆಲ ಸಮವಾಗಿದೆ. ಭಂಡಾರ ಮನೆಯಲ್ಲಿದ್ದ ದೈವದ ಮೂರ್ತಿಗಳೂ ಕೂಡಾ ಮಣ್ಣಿನಡಿ ಸೇರಿ ಕೊಂಡಿವೆ. ಈ ದೈವಸ್ಥಾನದ ಪುನರುತ್ಥಾನವಾಗಬೇಕು ಎಂದು ತಿಳಿಸಿದ್ದರು.
ಜ್ಯೋತಿಷಿ ಕೆ.ವಿ. ಗಣೇಶ್ ಭಟ್ ಮುಳಿ ಪ್ರಶ್ನೆಯಲ್ಲಿ ಹೇಳಿದಂತೆ ಗ್ರಾಮಸ್ಥರು ಒಟ್ಟು ಸೇರಿ ಪೆರ್ನೆ ಗ್ರಾಮದ ಕೊರತ್ತಿಕಟ್ಟೆ ಮಾಡತ್ತಾರು ಪ್ರದೇಶದ ಕಾಡಿನಲ್ಲಿ ಹುಡುಕಾಟ ನಡೆಸಿದಾಗ ಮರ ಗಿಡಗಳು ಬೆಳೆದಿರುವ ಸ್ಥಿತಿಯಲ್ಲಿ ದೈವ ಸ್ಥಾನದ ಕಟ್ಟಡದ ಪಳೆಯುಳಿಕೆಗಳು ಕಂಡು ಬಂದಿದೆ. ಪಿಲಿಚಾಮುಂಡಿ, ಕೊರತ್ತಿ, ಹಾಗೂ ಉಳ್ಳಾಕ್ಲು ದೈವದ ಮೂರೂ ಗುಡಿಗಳು ಕಾಲಾಂತರದಲ್ಲಿ ಶಿಥಿಲಗೊಂಡು ಕೇವಲ ಗುಡಿಯ ಪಂಚಾಂಗ ಮಾತ್ರ ಮರಗಿಡಗಳ ಮಧ್ಯೆ ಗೋಚರಿಸುತ್ತಿರುವುದು ಅಲ್ಲಿದ್ದ ಜನರನ್ನು ಅಚ್ಚರಿಗಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…