ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು, ಶಕ್ತಿಶಾಲಿಗಳು : ನಟಿ ರಮ್ಯಾ ವಾಗ್ದಾಳಿ – vishwanews24
ದರ್ಶನ್, ಪ್ರಜ್ವಲ್ ರೇವಣ್ಣ, ಯಡಿಯೂರಪ್ಪ, ಸೂರಜ್ ವಿರುದ್ಧ ಕಿಡಿಕಾರಿದ ನಟಿ ರಮ್ಯಾ
ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಅವರು ಮತ್ತೆ ಟ್ವಟರ್ನಲ್ಲಿ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದು, ಈಗ ಅವರು ನಟ ದರ್ಶನ್, ಪ್ರಜ್ವಲ್ ರೇವಣ್ಣ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸೂರಜ್ ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ.
ಟ್ವಿಟರ್ನಲ್ಲಿ ಅವರು ಕಾನೂನನ್ನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು.
The ones breaking the law who have been in the news are the rich and powerful and the ones at the receiving end of their violent actions are the poor, women & children. The common people of Karnataka. Hats off to the police and media for bringing these crimes out. Justice will…
— Ramya/Divya Spandana (@divyaspandana) June 22, 2024
ಅವರ ಹಿಂಸಾತ್ಮಕ ಕ್ರಿಯೆಗಳಿಗೆ ಬಡವರು, ಮಹಿಳೆಯರು ಮತ್ತು ಮಕ್ಕಳು ಬದುಕು ನಾಶವಾಗಿದೆ. ಈ ಅಪರಾಧಗಳನ್ನು ಹೊರತಂದ ಪೊಲೀಸರು ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನು ಅವುಗಳ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ನಿಜವಾಗಿಯೂ ನ್ಯಾಯ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ- ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತಿದ್ದೇವೆ? ಅಂತ ಹೇಳಿದ್ದಾರೆ.
ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ – vishwanews24
