ಬೆಂಗಳೂರು: ಗೃಹ ಸಚಿವರ ಜಿಲ್ಲೆಯಲ್ಲೇ ಕೊಲೆಯಾಗಿದೆ. ಕಾನೂನು ಸುವ್ಯವಸ್ಥೆ ನಿರ್ವಹಿಸಲಾಗದ ಗೃಹ ಸಚಿವ ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಶಿವಮೊಗ್ಗ ಕೊಲೆ ಪ್ರಕರಣ ಕುರಿತು ಮಾತನಾಡಿದ ಸಿದ್ದರಾಮಯ್ಯ, ಇಂತಹ ವಿಚಾರದಲ್ಲಿ ರಾಜಕೀಯ ಮಾಡಬಾರದು. ತಪ್ಪಿತಸ್ಥರು ಯಾರೇ ಇರಲಿ ಕಠಿಣ ಶಿಕ್ಷೆ ಆಗಬೇಕು. ಇದು ಸರ್ಕಾರದ ವೈಫಲ್ಯ. ನಾವು ಅಹಿಂಸೆಯಲ್ಲಿ ನಂಬಿಕೆ ಇಟ್ಟವರು. ಯುವಕನ ಕೊಲೆಯಾಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಯಾರದ್ದೇ ಕೊಲೆಯಾದರೂ ಕಠಿಣ ಶಿಕ್ಷೆ ಆಗಬೇಕು. ಕೊಲೆಯನ್ನು ಖಂಡಿಸುತ್ತೇವೆ. ಹರ್ಷ ಎನ್ನುವ ಯುವಕನ ಕೊಲೆಯಾಗಿದೆ. ಕಾರಿನಲ್ಲಿ ಬಂದು ಕೊಲೆ ಮಾಡಲಾಗಿದೆ ಅಂತ ನೋಡಿದೆ. ತಪ್ಪಿತಸ್ಥರು ಯಾರೇ ಇರಲಿ, ಯಾವುದೇ ಸಂಘಟನೆ ಆದರೂ, ಕಠಿಣ ಕ್ರಮ ತೆಗೆದುಕೊಳ್ಳಲಿ. ಗೃಹಸಚಿವರು ಅದೇ ಜಿಲ್ಲೆಯವರು. ಇದಕ್ಕೆ ಸರ್ಕಾರ ಜವಾಬ್ದಾರರಲ್ವಾ? ಹೋಮ್ ಮಿನಿಸ್ಟರ್ ಮತ್ತು ಈಶ್ವರಪ್ಪ ಜವಾಬ್ದಾರರಲ್ವಾ? ಇಂತಹ ವಿಚಾರದಲ್ಲಿ ಕಾಂಗ್ರೆಸ್ ಅಂತ ಹೇಳಬಾರದು. ಮೊದಲು ಅರೆಸ್ಟ್ ಮಾಡಿ. ತಪ್ಪಿತಸ್ಥರನ್ನು ಪತ್ತೆ ಮಾಡಲಿ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ :
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…